ಹಸುಗಳ ಕೆಚ್ಚಲು ಕೊಯ್ದ ಘಟನೆ: ಮಾಲೀಕರಿಗೆ ಮೂರು ಹಸುಗಳನ್ನು ಉಡುಗೊರೆಯಾಗಿ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್

ಗಾಯಗೊಂಡ ಹಸುಗಳನ್ನು ಚಿಕಿತ್ಸೆಗಾಗಿ ಚಾಮರಾಜಪೇಟೆಯ ಪಶು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಮಾಲೀಕರಿಗೆ ಮೂರು ಹಸುಗಳನ್ನು ಉಡುಗೊರೆಯಾಗಿ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್
ಮಾಲೀಕರಿಗೆ ಮೂರು ಹಸುಗಳನ್ನು ಉಡುಗೊರೆಯಾಗಿ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್
Updated on

ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಗೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಜಾನುವಾರುಗಳ ಮಾಲೀಕರಿಗೆ ಬುಧವಾರ ಮೂರು ಹಸುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

ಇದರೊಂದಿಗೆ ಕುಟುಂಬಕ್ಕೆ ಮೂರು ಲಕ್ಷ ರೂ.ಗಳ ಪರಿಹಾರವನ್ನು ಜಮೀರ್ ನೀಡಿದ್ದಾರೆ. ಈ ವೇಳೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಷ್, ಗೌಸಿ, ವಿನಾಯಕ್, ಪ್ರಸಾದ್ ಇದ್ದರು.

ಚಾಮರಾಜಪೇಟೆಯ ವಿನಾಯಕನಗರ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ಮೂರು ಹಸುಗಳ ಕೆಚ್ಚಲು ಕತ್ತರಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), 2023ರ ಸೆಕ್ಷನ್ 325 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಬಿಹಾರದ ಚಂಪಾರಣ್ ಮೂಲದ ಶೇಖ್ ನಸ್ರು (30) ಎಂಬಾತನನ್ನು ಭಾನುವಾರ ಹಸುಗಳ ಕೆಚ್ಚಲು ಕತ್ತರಿಸಿದ ಆರೋಪದ ಮೇಲೆ ಬಂಧಿಸಲಾಗಿದೆ.

ಹಸುಗಳ ಮಾಲೀಕ ಕರ್ಣ ಮಾತನಾಡಿ, ‘ನನಗೆ ತೀವ್ರ ಬೇಸರವಾಗಿದೆ, ರಾತ್ರಿ ನಮ್ಮ ಮನೆ ಬಳಿಯಲ್ಲಿ ಹಸುಗಳನ್ನು ಕಟ್ಟಿ ಹಾಕಲಾಗಿತ್ತು. ಬೆಳಗ್ಗೆ ಈ ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ. ಯಾರು ಈ ಕೃತ್ಯ ಎಸಗಿದ್ದಾರೆ ಎಂಬುದು ನಮಗೆ ತಿಳಿದಿಲ್ಲ. ಆದರೆ, ನಾವು ದೂರು ದಾಖಲಿಸಿದ್ದೇವೆ. ನನಗೆ ನ್ಯಾಯ ಬೇಕು ಎಂದರು.

ಮಾಲೀಕರಿಗೆ ಮೂರು ಹಸುಗಳನ್ನು ಉಡುಗೊರೆಯಾಗಿ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್
ಹಸು ಕೆಚ್ಚಲು ಕತ್ತರಿಸಿದ ಪ್ರಕರಣ: ಪ್ರಾಣಿ ಕಲ್ಯಾಣಕ್ಕೆ BBMP 1533 ಸಹಾಯವಾಣಿ ಆರಂಭ

ಗಾಯಗೊಂಡ ಹಸುಗಳನ್ನು ಚಿಕಿತ್ಸೆಗಾಗಿ ಚಾಮರಾಜಪೇಟೆಯ ಪಶು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸಂಕ್ರಾಂತಿ ಹಬ್ಬಕ್ಕೂ ಮುನ್ನ ಅಪರಾಧಿಗಳನ್ನು ಬಂಧಿಸದಿದ್ದರೆ ‘ಕಪ್ಪು ಸಂಕ್ರಾಂತಿ’ ಆಚರಿಸುವುದಾಗಿ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿತ್ತು. ಪೊಲೀಸರು ಬಂಧಿಸಿರುವ ವ್ಯಕ್ತಿಯು ನಿರಪರಾಧಿಯಾಗಿದ್ದು, ಘಟನೆಯನ್ನು ನ್ಯಾಯಯುತವಾಗಿ ತನಿಖೆ ನಡೆಸಬೇಕೆಂದು ಬಿಜೆಪಿ ಮಂಗಳವಾರ ಒತ್ತಾಯಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com