ಅನಧಿಕೃತ ಕಟ್ಟಡಗಳ ವಿರುದ್ಧ ಸರ್ಕಾರ ಕ್ರಮ: 100 ಕಟ್ಟಡಗಳ BWSSB ಸೇವೆ ಸ್ಥಗಿತ; ಕೊಳಚೆ ನೀರಿನಿಂದ ಗಬ್ಬುನಾರುತ್ತಿರುವ ರಸ್ತೆಗಳು!

ಅನಧಿಕೃತ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಲೋಕಾಯುಕ್ತ ಕೂಡ ಬಿಡಬ್ಲ್ಯುಎಸ್ಎಸ್'ಬಿ ಮತ್ತು ಬೆಸ್ಕಾಂಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ನಗರದಲ್ಲಿ ನಾಯಿಕೊಡೆಗಳಂತೆ ತಲೆ ಎತ್ತಿರುವ ಅನಧಿಕೃತ ಕಟ್ಟಡಗಳ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ವೈಟ್‌ಫೀಲ್ಡ್ ವಾರ್ಡ್‌ನಲ್ಲಿ ಸುಮಾರು 100 ಅಕ್ರಮ ಮತ್ತು ಅನಧಿಕೃತ ಕಟ್ಟಡಗಳಿಗೆ ನೀಡಲಾಗಿದ್ದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB)ಯ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಅನಧಿಕೃತ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಲೋಕಾಯುಕ್ತ ಕೂಡ ಬಿಡಬ್ಲ್ಯುಎಸ್ಎಸ್'ಬಿ ಮತ್ತು ಬೆಸ್ಕಾಂಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ. ಈ ನಿರ್ದೇಶನದ ಅನುಗುಣವಾಗಿ ನಾವು ಕ್ರಮಗಳ ಕೈಗೊಂಡಿದ್ದೇವೆಂದು ಅಧಿಕಾರಿಗಳು ಹೇಳಿದ್ದಾರೆ.

ಕಟ್ಟಡಗಳಿಂದ ಬರುತ್ತಿರುವ ಕೊಳಚೆ ನೀರು ಬಿಬಿಎಂಪಿಯ ಚರಂಡಿಗಳು ಹಾಗೂ ಮುಖ್ಯ ರಸ್ತೆಗಳಿಗೆ ಹರಿಯುತ್ತಿದೆ. ಇದೀಗ ಬಿಬಿಎಂಪಿ ಕ್ರಮ ಕೈಗೊಂಡು ಅಕ್ರಮ ಕಟ್ಟಡಗಳ ನೆಲಸಮ ಮಾಡಬೇಕು. ಇಲ್ಲವೇ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸಬೇಕಾಗುತ್ತದೆ ಎಂದು ಬಿಡಬ್ಲ್ಯೂಎಸ್‌ಎಸ್‌ಬಿ ಅಧಿಕಾರಿಗಳು ತಿಳಿಸಿದ್ದಾರೆ.

ನಾವು ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳುತ್ತಿದ್ದೇವೆ. ಅಕ್ರಮ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸುಪ್ರೀಂಕೋರ್ಟ್ ನಿರ್ದೇಶನವಿದೆ. ಲೋಕಾಯುಕ್ತರು ಕೂಡ ಬೆಳವಣಿಗೆಗಳನ್ನು ಗಮನಿಸುತ್ತಿದ್ದು, ಕ್ರಮ ಕೈಗೊಳ್ಳದಿರುವುದು ಕರ್ತವ್ಯಲೋಪ ಮತ್ತು ನ್ಯಾಯಾಂಗ ನಿಂದನೆಗೆ ಕಾರಣವಾಗುತ್ತದೆ. ಕಟ್ಟಡದ ಕಾನೂನುಬಾಹಿರ ಸ್ಥಿತಿಯ ಬಗ್ಗೆ ನಾವು ದೃಢೀಕರಣವನ್ನು ಪಡೆದ ನಂತರ, ನೋಟಿಸ್ ಕಳುಹಿಸುತ್ತಿದ್ದೇವೆ. ಬಳಿಕ ಸೇವೆಗಳನ್ನು ಸಂಪರ್ಕ ಕಡಿತಗೊಳಿಸುತ್ತೇವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಂಗ್ರಹ ಚಿತ್ರ
BBMP: 402 ಅಕ್ರಮ ಕಟ್ಟಡ ನೆಲಸಮಗೊಳಿಸಲು ಬಿಬಿಎಂಪಿ ಮುಂದು!

ಅನಧಿಕೃತ ಕಟ್ಟಡಗಳನ್ನು ಕೆಡವುವಂತಹ ಜವಾಬ್ದಾರಿ ಬಿಬಿಎಂಪಿ ಎಂಜಿನಿಯರ್‌ಗಳ ಮೇಲಿದೆ ಎಂದು ಬಿಡಬ್ಲ್ಯೂಎಸ್‌ಎಸ್‌ಬಿ ಕಾರ್ಯನಿರ್ವಾಹಕ ಎಂಜಿನಿಯರ್ ಮಿರ್ಜಾ ಅನ್ವರ್ ಹೇಳಿದ್ದಾರೆ.

ಸ್ಥಳೀಯ ನಿವಾಸಿಗಳು ಮಾತನಾಡಿ, ಕಳೆದ ಕೆಲವು ದಿನಗಳಿಂದ ವೈಟ್‌ಫೀಲ್ಡ್‌ನ ಇಸಿಸಿ ರಸ್ತೆ, ಬೋರ್‌ವೆಲ್ ರಸ್ತೆ ಮತ್ತು ಇತರ ರಸ್ತೆಗಳಲ್ಲಿ ಚರಂಡಿ ನೀರಿು ತುಂಬಿದೆ. ನಗರ ಪಾಲಿಕೆಗೆ ಮೂಲ ಸೌಕರ್ಯ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಬಿಬಿಎಂಪಿ ಅಧಿಕಾರಿಗಳೇ ಅವಕಾಶ ಮಾಡಿಕೊಟ್ಟಿದ್ದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೂರು ವರ್ಷಗಳ ಹಿಂದೆಯೇ ಬಿಬಿಎಂಪಿ ವಲಯ ಆಯುಕ್ತರು ಅಥವಾ ಜಂಟಿ ಆಯುಕ್ತರು ಮತ್ತು ವಾರ್ಡ್ ಎಂಜಿನಿಯರ್‌ಗಳು ಈ ಅನಧಿಕೃತ ನಿರ್ಮಾಣಗಳನ್ನು ನಿಲ್ಲಿಸಿದಿದ್ದರೆ, ಈಗ ಈ ಪರಿಸ್ಥಿತಿ ಎದುರಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com