ನೆಲಮಂಗಲ: ಓಂಶಕ್ತಿ ಮಾಲಾಧಾರಿಗಳಿಗೆ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಕಾರು ಡಿಕ್ಕಿ, ಹಲವರಿಗೆ ಗಾಯ

ಮೂರು ಮಂದಿ ಮಾಲಾಧಾರಿಗಳಿಗೆ ಕಾರು ಡಿಕ್ಕಿ ಹೊಡೆದಿದ್ದು, ಇಬ್ಬರು ಮಾಲಾಧಾರಿಗೆ ಗಂಭೀರ ಹಾನಿಯಾಗಿದೆ ಎನ್ನಲಾಗಿದೆ.
Veerendra puppy
ವಿರೇಂದ್ರ ಪಪ್ಪಿ
Updated on

ಬೆಂಗಳೂರು: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಅವರ Benz ಕಾರು ಬೆಂಗಳೂರು ಸಮೀಪದ ನೆಲಮಂಗಲದಲ್ಲಿ ಅಪಘಾತಕ್ಕೀಡಾಗಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳಿಗೆ ಕಾರು ಡಿಕ್ಕಿ ಹೊಡೆದಿದೆ.

ಗುರುವಾರ ಬೆಳಿಗ್ಗೆ ಬೆಂಗಳೂರು ತುಮಕೂರು ಹೆದ್ದಾರಿಯಲ್ಲಿ ಶಾಸಕರು ಸಂಚರಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆಸಿದೆ. ಮೂರು ಮಂದಿ ಮಾಲಾಧಾರಿಗಳಿಗೆ ಕಾರು ಡಿಕ್ಕಿ ಹೊಡೆದಿದ್ದು, ಇಬ್ಬರು ಮಾಲಾಧಾರಿಗೆ ಗಂಭೀರ ಹಾನಿಯಾಗಿದೆ ಎನ್ನಲಾಗಿದೆ. ಶಾಸಕರು ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಶಾಸಕರು ಚಿತ್ರದುರ್ಗದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದರು. ನೆಲಮಂಗಲ ಸಮೀಪ ಪಾದಯಾತ್ರೆ ಮೂಲಕ ಓಂ ಶಕ್ತಿ ಮಾಲಾಧಾರಿಗಳು ಸಾಗುತ್ತಿದ್ದರು. ಈ ವೇಳೆ ಅಪಘಾತ ನಡೆದಿದೆ. ಶಾಸಕರು ಆಸ್ಪತ್ರೆಗೆ ಭೇಟಿ ನೀಡಿ ಗಾಯಗಳುಗಳ ಆರೋಗ್ಯ ವಿಚಾರಿಸಿದ್ದಾರೆ. ಚಿಕಿತ್ಸೆಗೆ ಅಗತ್ಯ ಕ್ರಮಕೈಗೊಳ್ಳವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

Veerendra puppy
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಟ್ವಿಸ್ಟ್​: Hit-and-run ಕೇಸ್ ದಾಖಲು

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com