ರಾಜ್ಯ ಸಚಿವ ಸಂಪುಟ ಸಭೆ: BBMP ಆಸ್ಪತ್ರೆಗಳ ಮೇಲ್ದರ್ಜೆಗೆ 413.71 ಕೋಟಿ ರೂ ಅನುಮೋದನೆ!

ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸುತ್ತಿರುವ ಎಲ್ಲಾ ಆಸ್ಪತ್ರೆಗಳನ್ನು 413. 71 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುವುದು
Minister HK Patil
ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್. ಕೆ.ಪಾಟೀಲ್
Updated on

ಬೆಂಗಳೂರು: ‘ಬ್ರಾಂಡ್ ಬೆಂಗಳೂರು’ ಯೋಜನೆಯಡಿ ಬಿಬಿಎಂಪಿ ನಿರ್ವಹಿಸುತ್ತಿರುವ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು 413. 71 ಕೋಟಿ ರೂ.ಗಳ ಯೋಜನೆಗೆ ಕರ್ನಾಟಕ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ್, ಈ ಯೋಜನೆಯಡಿ, ಶಿಥಿಲಗೊಂಡ ಕಟ್ಟಡಗಳನ್ನು ಹೊಸ ಕಟ್ಟಡಗಳೊಂದಿಗೆ ಬದಲಾಯಿಸಲಾಗುವುದು ಎಂದರು.

ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸುತ್ತಿರುವ ಎಲ್ಲಾ ಆಸ್ಪತ್ರೆಗಳನ್ನು 413. 71 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುವುದು ಎಂದು ತಿಳಿಸಿದರು.

Minister HK Patil
BBMP: 402 ಅಕ್ರಮ ಕಟ್ಟಡ ನೆಲಸಮಗೊಳಿಸಲು ಬಿಬಿಎಂಪಿ ಮುಂದು!

13 ಬಿಬಿಎಂಪಿ ಆಸ್ಪತ್ರೆಗಳನ್ನು 30 ಹಾಸಿಗೆಗಳಿಗೆ , ಐದನ್ನು 50 ಹಾಸಿಗೆಗಳ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು. 22 ದಂತ ಆಸ್ಪತ್ರೆಗಳು ಮತ್ತು ಏಳು ಫಿಸಿಯೋಥೆರಪಿ ಆಸ್ಪತ್ರೆಗಳನ್ನು ಸಹ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಬಿಬಿಎಂಪಿ ನಡೆಸುವ ಎಲ್ಲಾ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಸಚಿವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com