ಲೈಂಗಿಕ ದೌರ್ಜನ್ಯ ಪ್ರಕರಣ: SIT ಸೀಜ್‌ ಮಾಡಿರುವ ಸಂತ್ರಸ್ತೆಯರ ವೀಡಿಯೋ ನೀಡಲು ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ನಕಾರ!

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌ಐಟಿ ಜಪ್ತಿ ಮಾಡಿರುವ ವಿಡಿಯೋ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
Prajwal Revanna
ಪ್ರಜ್ವಲ್ ರೇವಣ್ಣ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಹಲವು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಜೆಡಿಎಸ್ ಉಚ್ಛಾಟಿತ ನಾಯಕ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ನಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ. ಸಂತ್ರಸ್ತೆಯರ ಡಿಜಿಟಲ್ ಸಾಕ್ಷ್ಯ ನೀಡುವಂತೆ ಅವರು ಸಲ್ಲಿಸಿದ ಮನವಿಯನ್ನು ನಿರಾಕರಿಸಿದೆ. ಪ್ರಕರಣ ದಾಖಲು ಮಾಡಿದವರ ವಿಡಿಯೋ ಮಾತ್ರ ನೀಡಿ, ಇತರ ಸಂತ್ರಸ್ತೆಯರ ವಿಡಿಯೋ ನೀಡದಂತೆ ಹೈಕೋರ್ಟ್ ಆದೇಶ ನೀಡಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌ಐಟಿ ಜಪ್ತಿ ಮಾಡಿರುವ ವಿಡಿಯೋ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಗುರುವಾರ ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ, ಎಲ್ಲ ವಿಡಿಯೋಗಳು ಅಶ್ಲೀಲವಾಗಿದೆ. ಪ್ರಜ್ವಲ್ ರೇವಣ್ಣ ಅಂದ ಕೂಡಲೇ ಕಾನೂನು ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿ ಅವರ ಮನವಿಯನ್ನು ತಿರಸ್ಕರಿಸಿತು.

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಮತ್ತು ಕ್ರಿಮಿನಲ್ ಬೆದರಿಕೆಯ ಕನಿಷ್ಠ ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ಆರೋಪಿಯಾಗಿರುವ ರೇವಣ್ಣ , ತಾನು ಕೇಳುತ್ತಿರುವ ಡಿಜಿಟಲ್ ಸಾಕ್ಷ್ಯಗಳು ಅಶ್ಲೀಲವಾಗಿಲ್ಲ ಎಂದು ವಾದಿಸಿದರು. ಆದಾಗ್ಯೂ, ನ್ಯಾಯಾಲಯವು ಈ ಮನವಿಯನ್ನು ತಳ್ಳಿಹಾಕಿತು, ಇತರ ಸಂತ್ರಸ್ತೆಯರ ಖಾಸಗಿತನ ರಕ್ಷಿಸುವ ಪ್ರಾಮುಖ್ಯತೆಯನ್ನು ಒತ್ತಿಹೇಳಿತು.

ಮನೆ ಕೆಲಸದವರ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದ ಕೇಸ್ ನಲ್ಲಿ ವಿಡಿಯೋ ಸಾಕ್ಷ್ಯ ಪಡೆಯಲು ನೀವು ಅರ್ಹರಾಗಿದ್ದೀರಿ, ಆದರೆ ಇತರೆ ಮಹಿಳೆಯರ ಖಾಸಗಿತನ ಉಲ್ಲಂಘಿಸುವ ದಾಖಲೆಗಳು ನಿಮಗೆ ಏಕೆ ಬೇಕು? ಎಂದು ನ್ಯಾಯಾಧೀಶರಾದ ನಾಗಪ್ರಸನ್ನ ಅವರು ಪ್ರಶ್ನಿಸಿದರು.

ಈ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ ಎಸ್‌ಪಿಪಿ ಜಗದೀಶ್, ಈಗಾಗಲೇ ಎಲ್ಲಾ ವಿಡಿಯೋ ಫೋಟೋ ನೀಡಲಾಗಿದೆ. ಪ್ರಕರಣ ವಿಳಂಬ ಮಾಡುವುಕ್ಕೆ ಕೋರ್ಟ್ ಗಳಲ್ಲಿ ಈ ರೀತಿ ಅರ್ಜಿ ಹಾಕಲಾಗುತ್ತಿದೆ. ಕೆಳಹಂತದ ನ್ಯಾಯಾಲಯದಲ್ಲೂ ಕೂಡ ಸಿಡಿಆರ್ ಕೇಳಿ ಅರ್ಜಿ ಹಾಕಿದ್ದಾರೆ ಎಂದು ವಾದಿಸಿದರು.

ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದ ಚಿತ್ರಗಳು ಮತ್ತು ವೀಡಿಯೊಗಳ ಪ್ರತಿಗಳನ್ನು ಈಗಾಗಲೇ ಪ್ರತಿವಾದಿಗೆ ಒದಗಿಸಲಾಗಿದೆ. ರೇವಣ್ಣ ಈಗ ಅವರ ಕಾರು ಚಾಲಕನ ಸ್ಯಾಮ್ ಸಂಗ್ ಫೋನ್ ನಿಂದ ವಶಕ್ಕೆ ಪಡೆಯಲಾದ 15,000 ಕ್ಕೂ ಹೆಚ್ಚು ಚಿತ್ರಗಳು ಮತ್ತು 2,000 ವೀಡಿಯೊಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು.

Prajwal Revanna
ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್ ಜಾಮೀನು ಅರ್ಜಿ ವಜಾ!

ಪ್ರಜ್ವಲ್ ರೇವಣ್ಣ ವಿರುದ್ಧದ ಹಲವು ಮಹಿಳೆಯರಿಗೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಎಸ್ ಐಟಿ ನಡೆಸುತ್ತಿದ್ದು, ಒಂದು ಪ್ರಕರಣದಲ್ಲಿ 2,144 ಪುಟಗಳ ಚಾರ್ಜ್ ಶೀಟ್ ನ್ನು ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com