ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ ರವಿ ಅವಾಚ್ಯ ಶಬ್ದ ಬಳಕೆ ಆರೋಪ: ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢ

ಬೆಳಗಾವಿ ಚಳಿಗಾಲದ ಅಧಿವೇಶನದ ಕೊನೆಯ ದಿನ ಡಿಸೆಂಬರ್​ 19 ರಂದು ಪರಿಷತ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ ರವಿ ಅವಾಚ್ಯ ಶಬ್ದ ಬಳಕೆ ಆರೋಪ: ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢ
Updated on

ಬೆಂಗಳೂರು: ಕಳೆದ ಬೆಳಗಾವಿ ಚಳಿಗಾಲ ಅಧಿವೇಶನದ ಕೊನೆಯ ದಿನ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವಾಚ್ಯ ಶಬ್ದ ಬಳಸಿದ್ದಾರೆ ಎಂದು ಆರೋಪಿಸಿ ನಂತರ ಅವರನ್ನು ಪೊಲೀಸರು ಬಂಧಿಸಿ ದೂರು ದಾಖಲಾಗಿ ಆರೋಪ-ಪ್ರತ್ಯಾರೋಪಗಳು ಸಾಗಿ ಇಡೀ ರಾಜ್ಯಾದ್ಯಂತ ಸುದ್ದಿಯಾಗಿತ್ತು.

ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ರಾಜ್ಯ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ (DAPR​) ನೀಡಿದ್ದ ಸದನದ ವಿಡಿಯೋವನ್ನು ಪರೀಕ್ಷೆಗೆ ಒಳಪಡಿಸಿದಾಗ ಸಿಟಿ ರವಿ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢವಾಗಿದೆ ಎಂದು ತಿಳಿದುಬಂದಿದೆ.

ನಾಲ್ಕು ಗಂಟೆಯ ವಿಡಿಯೋ ರೆಕಾರ್ಡ್​ನಲ್ಲಿ ಒಟ್ಟು ಏಳು ಬಾರಿ ಅವಾಚ್ಯ ಶಬ್ದ ಬಳಕೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದಬಂದಿದೆ, ಅವಾಚ್ಯ ಶಬ್ದ ಬಳಸಿದ ಧ್ವನಿ ಪತ್ತೆಗೆ ಸಿಟಿ ರವಿ ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿದೆ. ಆದರೆ ತಾನು ಅವಾಚ್ಯ ಶಬ್ದ ಬಳಸಿಲ್ಲ ಎಂದು ಸಿಟಿ ರವಿ ಹೇಳುತ್ತಿದ್ದಾರೆ. ಜೊತೆಗೆ ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ್ದಾರೆ. ಹೀಗಾಗಿ, ನ್ಯಾಯಾಲಯದ ಮೂಲಕ ವಿಚಾರಣೆಗೆ ಮತ್ತು ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ ರವಿ ಅವಾಚ್ಯ ಶಬ್ದ ಬಳಕೆ ಆರೋಪ: ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢ
ಕಾರು ಅಪಘಾತ: ಲಕ್ಷ್ಮಿ ಹೆಬ್ಬಾಳ್ಕರ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ; ವೈದ್ಯರ ಮಾಹಿತಿ

ಬೆಳಗಾವಿ ಚಳಿಗಾಲದ ಅಧಿವೇಶನದ ಕೊನೆಯ ದಿನ ಡಿಸೆಂಬರ್​ 19 ರಂದು ಪರಿಷತ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಮಾತಿನ ಚಕಮಕಿ ನಡುವೆ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಂಸದೀಯ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಹಿರೇಬಾಗೇವಾಡಿ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com