HMT ಭೂ ವಿವಾದ: 433 ಎಕರೆ ಭೂಮಿ ಹಿಂಪಡೆಯಲು ಕರ್ನಾಟಕ ಸಚಿವ ಸಂಪುಟ ಅನುಮೋದನೆ

ಅರಣ್ಯ ಅಧಿಕಾರಿಗಳು ತಮ್ಮದೇ ಆದ ನಿರ್ಧಾರ ತೆಗೆದುಕೊಂಡಿದ್ದು, 2015 ರಲ್ಲಿ ವಿವಾದಿತ ಭೂಮಿಯ ಡಿನೋಟಿಫಿಕೇಶನ್ ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರ ಕೋರಿದೆ.
HK Patil
ಎಚ್.ಕೆ ಪಾಟೀಲ್
Updated on

ಬೆಂಗಳೂರು: ಎಚ್‍ಎಂಟಿ ಸಂಸ್ಥೆಯ ಸ್ವಾಧೀನದಲ್ಲಿರುವ 14,300 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ರಾಜ್ಯ ಸರಕಾರಕ್ಕೆ ಹಿಂಪಡೆಯಲು ಅಗತ್ಯ ಕ್ರಮ ಜರುಗಿಸಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಚ್‍ಎಂಟಿ ಕಾರ್ಖಾನೆಯು ಬೆಂಗಳೂರಿನಲ್ಲಿ ಹೊಂದಿರುವ ಪ್ರದೇಶಗಳನ್ನು ಕೇಂದ್ರ ಸರಕಾರದ ಇತರೆ ಸಂಸ್ಥೆಗಳಿಗೆ ಹಸ್ತಾಂತರಿಸಲು ನಿರಾಕ್ಷೇಪಣಾ ಪತ್ರ ನೀಡುವ ಕುರಿತು ಅಧಿಕಾರಿಗಳು ತಮ್ಮದೇ ಆದ ನಿರ್ಧಾರ ತೆಗೆದುಕೊಂಡಿದ್ದರು ಎಂದು ಹೇಳಿದರು.

ಅಲ್ಲದೇ, ಸಚಿವ ಸಂಪುಟದ ಪೂರ್ವಾನುಮತಿ ಅಥವಾ ಉನ್ನತ ಮಟ್ಟದ ಸಮಿತಿಯ ಅನುಮೋದನೆಯನ್ನು ಪಡೆಯದೇ ಸುಪ್ರಿಂ ಕೋರ್ಟ್‍ಗೆ 2015ರಲ್ಲಿ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಹಿಂಪಡೆಯಲು ಸಲ್ಲಿಸಲಾಗಿರುವ ರಾಜ್ಯ ಸರಕಾರದ ಅರ್ಜಿ ಕುರಿತು ಅರಣ್ಯ ಸಚಿವರು ತೆಗೆದುಕೊಂಡಿರುವ ನಿರ್ಣಯಕ್ಕೆ ಸಚಿವ ಸಂಪುಟ ಸಭೆ ಘಟನೋತ್ತರ ಮಂಜೂರಾತಿ ನೀಡಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

ಅರಣ್ಯ ಅಧಿಕಾರಿಗಳು ತಮ್ಮದೇ ಆದ ನಿರ್ಧಾರ ತೆಗೆದುಕೊಂಡಿದ್ದು, 2015 ರಲ್ಲಿ ವಿವಾದಿತ ಭೂಮಿಯ ಡಿನೋಟಿಫಿಕೇಶನ್ ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರ ಕೋರಿದೆ. ಅಧಿಕಾರಿಗಳು 14,300 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿಯನ್ನು ಡಿನೋಟಿಫಿಕೇಶನ್ ಮಾಡಲು ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದು, ಕಾಯ್ದಿರಿಸಿದ ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಲು ಮಧ್ಯಂತರ ಅರ್ಜಿಯನ್ನು ಸಲ್ಲಿಸಿರುವುದು ಕರ್ತವ್ಯ ಲೋಪವಾಗಿದೆ ಎಂದು ವಿವರಿಸಿದರು.

HK Patil
HMT ಕಾರ್ಖಾನೆ ಪುನಶ್ಚೇತನ; ನಿವೃತ್ತ ಕಾರ್ಮಿಕರಿಗೆ 361 ಕೋಟಿ ರೂ ವೇತನ ಬಾಕಿ ಪಾವತಿಗೆ ಕ್ರಮ: HDK

HMT ಪುನರುಜ್ಜೀವನಗೊಳಿಸಲು ಕೇಂದ್ರ ಬೃಹತ್ ಕೈಗಾರಿಕೆಗಳು ಮತ್ತು ಉಕ್ಕು ಸಚಿವ HD ಕುಮಾರಸ್ವಾಮಿ ಪ್ರಯತ್ನಿಸುತ್ತಿರುವ ಬಗ್ಗೆ ಕೇಳಿದಾಗ, ಯಾರೂ ಅವರನ್ನು ತಡೆಯುತ್ತಿಲ್ಲ ಎಂದು ಅವರು ಹೇಳಿದರು. HMT ಸುಮಾರು 160 ಎಕರೆ ಭೂಮಿಯನ್ನು ವಿವಿಧ ಸಂಸ್ಥೆಗಳು, ಸಾರ್ವಜನಿಕ ವಲಯದ ಸಂಸ್ಥೆಗಳು, ಪ್ರತಿಷ್ಠಿತ ಸಂಸ್ಥೆಗಳು ಮತ್ತು ವ್ಯಕ್ತಿಗಳಿಗೆ ಮಾರಾಟ ಮಾಡಿದೆ ಎಂದು ಪಾಟೀಲ್ ಹೇಳಿದರು.

ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿಯು ಈ ಭೂಮಿಯ ಅಗತ್ಯವನ್ನು ಒತ್ತಿ ಹೇಳಿತ್ತು. "ನಮ್ಮ ಅರಣ್ಯ ಸಚಿವರು HMT ಆ ಅರಣ್ಯ ಭೂಮಿಯನ್ನು ಮಾರಾಟ ಮಾಡುವುದಕ್ಕೆ ಗಂಭೀರ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳಿಂದ ಡಿ-ನೋಟಿಫೈ ಮಾಡದೆ ಅಥವಾ ಅನುಮತಿ ಪಡೆಯದೆ ಯಾರೂ ಅರಣ್ಯ ಭೂಮಿಯನ್ನು ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

HMTಗೆ ಸರ್ಕಾರ ನಿರ್ದಿಷ್ಟ ಉದ್ದೇಶಕ್ಕಾಗಿ ಭೂಮಿಯನ್ನು ನೀಡಿತ್ತು, ಆದರೆ ಅದನ್ನು ಆ ನಿರ್ದಿಷ್ಟ ಉದ್ದೇಶಕ್ಕಾಗಿ ಬಳಸದಿದ್ದಾಗ, ಅವರು ಆ ಆಸ್ತಿಯ ಮೇಲಿನ ನೈತಿಕ ಮತ್ತು ತಾಂತ್ರಿಕ ಹಕ್ಕುಗಳನ್ನು ಕಳೆದುಕೊಳ್ಳುತ್ತಾರೆ. "ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು, ನಾವು IA ಅನ್ನು ಹಿಂಪಡೆಯಲು ನಿರ್ಧರಿಸಿದ್ದೇವೆ. IA ಹಿಂಪಡೆಯಲು ಅರಣ್ಯ ಸಚಿವರು ತೆಗೆದುಕೊಂಡ ಕ್ರಮವನ್ನು ಅನುಮೋದಿಸಲು ಸಂಪುಟ ನಿರ್ಧರಿಸಿದೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com