ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನಹಾನಿ ಪ್ರಕರಣಕ್ಕೆ ಹೈಕೋರ್ಟ್ ತಡೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮಗೆ ನೀಡಿದ್ದ ಸಮನ್ಸ್‌ಗೆ ಪ್ರತಿಯಾಗಿ 2024ರ ಜೂನ್ 7ರಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಮುಂದೆ ಖುದ್ದು ಹಾಜರಾಗಿದ್ದರು.
High Court, Rahul Gandhi
ಕರ್ನಾಟಕ ಹೈಕೋರ್ಟ್ - ರಾಹುಲ್ ಗಾಂಧಿ
Updated on

ಬೆಂಗಳೂರು: 2023ರ ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ.

ಮಾನನಷ್ಟ ಮೊಕದ್ದಮೆಯ ಕಾನೂನುಬದ್ಧತೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕ್ರಿಯೆಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ ಮತ್ತು ಬಿಜೆಪಿಗೆ ತುರ್ತು ನೋಟಿಸ್ ಜಾರಿಗೊಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮಗೆ ನೀಡಿದ್ದ ಸಮನ್ಸ್‌ಗೆ ಪ್ರತಿಯಾಗಿ 2024ರ ಜೂನ್ 7ರಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಮುಂದೆ ಖುದ್ದು ಹಾಜರಾಗಿದ್ದರು ಮತ್ತು ನ್ಯಾಯಾಲಯ ಅವರಿಗೆ ಜಾಮೀನು ನೀಡಿತ್ತು.

ವಿಧಾನಸಭೆ ಚುನಾವಣೆಗೆ ಮುನ್ನ ಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ನೀಡುವ ಮೂಲಕ ಪಕ್ಷಕ್ಕೆ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿಯು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಖಾಸಗಿ ದೂರು ದಾಖಲಿಸಿತ್ತು.

High Court, Rahul Gandhi
'ಮೋಹನ್ ಭಾಗವತ್ ದೇಶದ್ರೋಹ ಎಸಗಿದ್ದಾರೆ, ಭಾರತೀಯರನ್ನು ಅವಮಾನಿಸಿದ್ದಾರೆ': ರಾಹುಲ್ ಗಾಂಧಿ

ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಮೊದಲ ಆರೋಪಿಯನ್ನಾಗಿ ಮತ್ತು ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿಯನ್ನು ಕ್ರಮವಾಗಿ 2, 3 ಮತ್ತು 4ನೇ ಆರೋಪಿಗಳನ್ನಾಗಿ ಮಾಡಲಾಗಿತ್ತು.

ಇದೇ ಪ್ರಕರಣದಲ್ಲಿ ಆರೋಪಿಗಳಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಳೆದ ವರ್ಷ ಜೂನ್ 1 ರಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಬಳಿಕ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com