
ಬೆಳಗಾವಿ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಳಗಾವಿಯ ವಿಜಯ ಆಸ್ಪತ್ರೆಗೆ ಭೇಟಿ ನೀಡಿ, ಇತ್ತೀಚೆಗೆ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಕೂಡ ಇದ್ದರು.
ಬಳಿಕ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಹೆಬ್ಬಾಳ್ಕರ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮೂಳೆ ತಜ್ಞ ಡಾ. ರವಿ ಪಾಟೀಲ್ ಅವರು ವಿವರಿಸಿದರು ಮತ್ತು ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದರು. ಕೆಲವೇ ದಿನಗಳಲ್ಲಿ ಸಚಿವೆ ಆಸ್ಪತ್ರೆಯಿಂದ ಬಿಡುಗಡೆಯಾಗಬಹುದು ಎಂದು ಹೇಳಿದರು.
ಇದೇ ವೇಳೆ ಜನವರಿ 21 ರಂದು ನಡೆಯಲಿರುವ ``ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್'' ಎಂಬ ಕಾಂಗ್ರೆಸ್ ಬೃಹತ್ ರ್ಯಾಲಿ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಬಿಜೆಪಿ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಇದು ಸಾರ್ವಜನಿಕ ಕಾರ್ಯಕ್ರಮವಾಗಿದ್ದು, ಎಲ್ಲರೂ ಇದರಲ್ಲಿ ಭಾಗವಹಿಸಲು ಸ್ವತಂತ್ರರು ಎಂದು ಹೇಳಿದರು.
Advertisement