ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಜಿಟಿಮಳೆ: ಹಲವು ಜಿಲ್ಲೆಗಳಲ್ಲಿ ವರುಣನ ಆಗಮನ ಸೂಚನೆ

ಇಂದು ಭಾನುವಾರ, ರಜಾ ದಿನವೆಂದು ಹೊರಗೆ ಹೋಗಲು ಯೋಜನೆ ಹಾಕಿಕೊಂಡವರು ಮಳೆ ಕಂಡು ಶಪಿಸುತ್ತಿದ್ದಾರೆ. ಜನವರಿ ತಿಂಗಳ ಚಳಿಗಾಲದಲ್ಲಿ ಮಳೆ ಬರುತ್ತಿರುವುದು ಕಂಡು ಜನ ಕಂಗಾಲಾಗಿದ್ದಾರೆ.
Representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಭಾನುವಾರ ಬೆಳ್ಳಂಬೆಳಗ್ಗೆ ಚಳಿ ಮಧ್ಯೆ ವರುಣನ ದರ್ಶನವಾಗಿದೆ. ಬೆಳಗ್ಗೆಯಿಂದಲೇ ಜಿಟಿಜಿಟಿ ಮಳೆ ಸುರಿಯುತ್ತಿದ್ದು ಈಗ ದಟ್ಟ ಮೋಡ ಕವಿದ ವಾತಾವರಣವಿದೆ. ಇನ್ನು ಕೆಲ ದಿನಗಳವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಭಾನುವಾರ, ರಜಾ ದಿನವೆಂದು ಹೊರಗೆ ಹೋಗಲು ಯೋಜನೆ ಹಾಕಿಕೊಂಡವರು ಮಳೆ ಕಂಡು ಶಪಿಸುತ್ತಿದ್ದಾರೆ. ಜನವರಿ ತಿಂಗಳ ಚಳಿಗಾಲದಲ್ಲಿ ಮಳೆ ಬರುತ್ತಿರುವುದು ಕಂಡು ಜನ ಕಂಗಾಲಾಗಿದ್ದಾರೆ. ಬೆಂಗಳೂರಿನ ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ, ಮೆಜೆಸ್ಟಿಕ್, ವಿಧಾನಸೌಧ, ಜೆಪಿನಗರ, ರಿಚ್​ಮಂಡ್ ವೃತ್ತ, ಟೌನ್​ಹಾಲ್ ಸೇರಿದಂತೆ ಬಹುತೇಕ ಕಡೆ ಮಳೆಯಾಗಿದೆ.

ಅದೇ ರೀತಿ ರಾಜ್ಯದ ಕರಾವಳಿ ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರಗಳಲ್ಲಿ ಕೂಡ ಇನ್ನೊಂದು ವಾರದವರೆಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Representational image
Planet Parade: ಅತ್ಯಪರೂಪದ ಖಗೋಳ ಕೌತುಕ; ಜ್ಯೋತಿಷ್ಯಶಾಸ್ತ್ರದಲ್ಲೂ ಮಹತ್ವ, ಬರಿಗಣ್ಣಲ್ಲೇ ನೋಡಬಹುದು!

ತುಮಕೂರು, ವಿಜಯನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಮಳೆ ಹಾಗೂ ಮೋಡಕವಿದ ವಾತಾವರಣದ ಕಾರಣ ರಾಜ್ಯಾದ್ಯಂತ ಚಳಿಯ ಪ್ರಮಾಣ ಕಡಿಮೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com