
ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಎನ್‌ಎ ಹ್ಯಾರೀಸ್ ಅವರ ಬೆಂಬಲಿಗರು ಅಳವಡಿಸಿರುವ ಅಕ್ರಮ ಬ್ಯಾನರ್ ಮತ್ತು ಫ್ಲೆಕ್ಸ್‌ಗಳಿಂದ ಸಿಲಿಕಾನ್ ಸಿಟಿ ಬೆಂಗಳೂರಿನ ಸೌಂದರ್ಯ ಹಾಳಾಗುತ್ತಿದ್ದು, ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಗ ಜೆಡಿಎಸ್ ಆಗ್ರಹಿಸಿದೆ.
ಹುಟ್ಟುಹಬ್ಬ, ಹೊಸ ವರ್ಷಾಚರಣೆ, ಸಂಕ್ರಾಂತಿ ಮುಂತಾದ ಸಂದರ್ಭಗಳಲ್ಲಿ ರಾಜಕೀಯ ಮುಖಂಡರ ಬೆಂಬಲಿಗರು ಜಾಹೀರಾತು ಫಲಕ, ಕಟೌಟ್, ಬ್ಯಾನರ್ ಹಾಕುತ್ತಿದ್ದಾರೆ ಎಂದು ಆರೋಪಿಸಿ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ನಾಗೇಶ್ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.
ಈ ಅಕ್ರಮಗಳ ಬಗ್ಗೆ ಅರಿವಿದ್ದರೂ ಬಿಬಿಎಂಪಿ ಅಧಿಕಾರಿಗಳು ಕ್ರಮಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ, ಅಕ್ರಮ ಫ್ಲಕ್ಸ್-ಬ್ಯಾನರ್ ಹಾಕುವವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪಾಲಿಕೆಯ ಮುಖ್ಯ ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆದರೆ, ಮಾಧ್ಯಮಗಳ ಮುಂದಿನ ಸ್ಟಂಟ್ ಎನಿಸುತ್ತಿದೆ. 8 ವಲಯಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳೀಯ ರಾಜಕಾರಣಿಗಳಿಗೆ ಬೆಂಬಲ ನೀಡುತ್ತಿದ್ದು, ಆಡಳಿತಾರೂಢ ಸರಕಾರ ದೊಡ್ಡ ಮಟ್ಟದಲ್ಲಿ ಬ್ಯಾನರ್ ಅಳವಡಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
2018ರ ಆಗಸ್ಟ್‌ನಲ್ಲಿ ನಗರದ ಸೌಂದರ್ಯಕ್ಕೆ ಧಕ್ಕೆ ಉಂಟು ಮಾಡುವ ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸುವಂತೆ ಹೈಕೋರ್ಟ್ ಆದೇಶ ಹೊರಡಿಸಿತ್ತು
Advertisement