
ಬೆಂಗಳೂರು: ಬಿಎಂಟಿಸಿ ಎಲೆಕ್ಟ್ರಿಕಲ್ ಬಸ್ ಬ್ರೇಕ್ ಫೇಲ್ ಆಗಿ ಬೀಡಾ ಅಂಗಡಿ ಹಾಗೂ ಡಾಬಾ ಗೋಡೆಗೆ ಡಿಕ್ಕಿಯಾದ ಘಟನೆ ನಾಗದೇವನಹಳ್ಳಿ ರಸ್ತೆಯಲ್ಲಿ ಭಾನುವಾರ ನಡೆದಿದೆ.
ಅಪಘಾತದ ವೇಳೆ ರಸ್ತೆಯಲ್ಲಿ ಯಾರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಅವಘಡದಿಂದ ಬಸ್‌ನಲ್ಲಿದ್ದ ಮೂವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಿಡದಿ ಡಿಪೋಗೆ ಸೇರಿದ ಬಸ್ ಶಿರ್ಕೆ ವೃತ್ತದಿಂದ ನಾಗರಭಾವಿಗೆ ತೆರಳುತ್ತಿದ್ದಾಗ ಬೆಳಗ್ಗೆ 6:25ಕ್ಕೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಂಗೇರಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಬಸ್ಸನ್ನು ರಸ್ತೆಯಿಂದ ತೆರವುಗೊಳಿಸಿದರು. ಢಾಬಾ ಮಾಲೀಕರ ದೂರಿನ ಆಧಾರದ ಮೇಲೆ ಜ್ಞಾನಭಾರತಿ ಸಂಚಾರ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ನಿರ್ಲಕ್ಷ್ಯದ ಚಾಲನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆಯ ವಿಡಿಯೋ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Advertisement