ಮುಡಾ ಸೈಟ್ ಜಪ್ತಿಗೂ ನನಗೂ ಸಂಬಂಧ ಇಲ್ಲ, ಇಡಿ ಪ್ರಕಟಣೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಯಾವುದೇ ಸಂಬಂಧ ಇಲ್ಲ. ರಾಜಕೀಯ ಉದ್ದೇಶದಿಂದ ತನಿಖೆ ಮಾಡುತ್ತಿದ್ದಾರೆ ಎಂದರು.
CM Siddaramaiah
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಜಾರಿ ನಿರ್ದೇಶನಾಲಯ(ಇಡಿ) ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನಗಳನ್ನು ಜಪ್ತಿ ಮಾಡಿರುವ ಬಗ್ಗೆ ಮತ್ತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಯಾವುದೇ ಸಂಬಂಧ ಇಲ್ಲ. ರಾಜಕೀಯ ಉದ್ದೇಶದಿಂದ ತನಿಖೆ ಮಾಡುತ್ತಿದ್ದಾರೆ. 50:50 ಸೈಟ್​​ಗಳನ್ನು ಮುಟ್ಟುಗೋಲು ಹಾಕಿದ್ದೇವೆ ಎನ್ನುತ್ತಿದ್ದಾರೆ. ಆದರೆ, ಅದಕ್ಕೂ ನನಗೂ ಸಂಬಂಧ ಇಲ್ಲ ಎಂದರು.

ಬಿಜೆಪಿ ಇಡಿಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿಸಿದೆ. ಇದು ರಾಜಕೀಯ ಪ್ರೇರಿತ ಮಾಧ್ಯಮ ಪ್ರಕಟಣೆ ಎಂದು ಸಿದ್ದರಾಮಯ್ಯ ಟೀಕಿಸಿದರು.

CM Siddaramaiah
ED ಮುಟ್ಟುಗೋಲು ಹಾಕಿಕೊಂಡಿರುವ ಸೈಟ್'ಗೂ ನಮ್ಮ 14 ನಿವೇಶನಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಇದೇ ವೇಳೆ ಬೆಳಗಾವಿ ಗಾಂಧಿ ಭಾರತ ಸಮಾವೇಶ ವಿಚಾರವಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಂಗಳವಾರ ಬೆಳಗಾವಿಯಲ್ಲಿ ಸಮಾವೇಶ ಮಾಡುತ್ತಿದ್ದೇವೆ. ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡುತ್ತೇವೆ. ನಂತರ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಯಲಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com