ED ಮುಟ್ಟುಗೋಲು ಹಾಕಿಕೊಂಡಿರುವ ಸೈಟ್'ಗೂ ನಮ್ಮ 14 ನಿವೇಶನಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪಿನ ಮೇಲೆ ಪರಿಣಾಮ ಬೀರಲು ಜಾರಿ ನಿರ್ದೇಶನಾಲಯವು(ಇಡಿ) ತಂದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಅನವಶ್ಯಕವಾಗಿ ಪ್ರಸ್ತಾಪ ಮಾಡಿದೆ.
yathindra siddaramaiah
ಯತೀಂದ್ರ ಸಿದ್ದರಾಮಯ್ಯ online desk
Updated on

ಮೈಸೂರು: ಇಡಿ ಮುಟ್ಟುಗೋಲು ಹಾಕಿಕೊಂಡಿರುವ ನಿವೇಶನಗಳಲ್ಲಿ ತಾಯಿ ಪಾರ್ವತಿ ಅವರಿಗೆ ಹಂಚಿಕೆಯಾಗಿದ್ದ 14 ನಿವೇಶನಗಳು ಸೇರಿಲ್ಲ. ಆದರೂ ಬಿಜೆಪಿ ಸಿದ್ದರಾಮಯ್ಯ ಅವರ ಹೆಸರನ್ನು ಹಾಳುಮಾಡಲು ಈ ರೀತಿಯ ಪಿತೂರಿ ನಡೆಸುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಎಂದು ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪಿನ ಮೇಲೆ ಪರಿಣಾಮ ಬೀರಲು ಜಾರಿ ನಿರ್ದೇಶನಾಲಯವು(ಇಡಿ) ತಂದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಅನವಶ್ಯಕವಾಗಿ ಪ್ರಸ್ತಾಪ ಮಾಡಿದೆ. ತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಉದ್ದೇಶದ ಹಿಂದೆ ಬೇರೆ ಹುನ್ನಾರ ಇರಬಹುದು ಎಂದು ಆರೋಪಿಸಿದ್ದಾರೆ.

ಇಡಿ ಮುಟ್ಟುಗೋಲು ಹಾಕಿಕೊಂಡಿರುವ ನಿವೇಶನಗಳಲ್ಲಿ, ತಾಯಿ ಪಾರ್ವತಿ ಅವರಿಗೆ ಹಂಚಿಕೆಯಾಗಿದ್ದ 14 ನಿವೇಶನಗಳು ಸೇರಿಲ್ಲ. ಹೀಗಿದ್ದರೂ ಬಿಜೆಪಿಯು ಸಿದ್ದರಾಮಯ್ಯ ಅವರ ಹೆಸರನ್ನು ಹಾಳು ಮಾಡಲು ಇಡಿ ಮೂಲಕ ಯತ್ನಿಸುತ್ತಿದೆ.‘ಇಡಿ ಅಧಿಕಾರಿಗಳು ಗೊಂದಲ ಸೃಷ್ಟಿಸಲು ಸಿದ್ದರಾಮಯ್ಯ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಮುಡಾ ಕುರಿತು ತನಿಖೆ ನಡೆಯುತ್ತಿದೆ. ಸಿಬಿಐ ತನಿಖೆಗೆ ವಹಿಸಬೇಕೇ ಬೇಡವೇ ಎಂಬ ವಿಚಾರ ಜ.26ರಂದು ನ್ಯಾಯಾಲಯದ ಮುಂದೆ ಬರುತ್ತಿದೆ. ಇಂತಹ ಹೊತ್ತಿನಲ್ಲಿ ಇಡಿ ಅಧಿಕಾರಿಗಳು ನ್ಯಾಯಾಲಯವನ್ನು ತಪ್ಪು ದಾರಿಗೆಳೆಯಲು ಉದ್ದೇಶಪೂರ್ವಕವಾಗಿ ಟ್ವೀಟ್ ಮಾಡಿ ಹಂಚಿಕೊಳ್ಳುವ ಕೆಲಸ ಮಾಡಿದ್ದಾರೆ. ನಾನು ಕಾನೂನು ಪ್ರಕಾರ ಹೋರಾಟ ಮಾಡುತ್ತೇವೆ.

yathindra siddaramaiah
ಮುಡಾ ಹಗರಣ: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ನ್ಯಾಯಾಲಯದ ತೀರ್ಪು ನೀಡುವ ಮುನ್ನವೇ ಹೆಸರು ಪ್ರಸ್ತಾಪಿಸಿರುವುದು ಕಾನೂನು ಬಾಹಿರವಾಗಿದೆ. 50:50 ಅನುಪಾತದಡಿ ನಿವೇಶನ ಹಂಚಿಕೆಯಾಗಿದ್ದು, ಬಿಜೆಪಿ ಸರ್ಕಾರದ ಅವಧಿಯಲ್ಲಿ. ಅಂದಿನ ಸರ್ಕಾರದಲ್ಲಿ ಇದ್ದವರನ್ನು ಹಾಗೂ ಆಗಿನ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಲಿ’ ಎಂದು ತಿಳಿಸಿದರು.

ಸಚಿವ ಎಚ್‌.ಸಿ.ಮಹದೇವಪ್ಪ ಅವರು ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರ ಹೆಸರಿಗೆ ಕಪ್ಪುಚುಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಮುಡಾ ಹಗರಣದ ಬಗ್ಗೆ ಲೀಗಲ್‌ ಟೀಂ ಎಲ್ಲವನ್ನೂ ಪರಿಶೀಲನೆ ಮಾಡುತ್ತಿದೆ. ಈ ವಿಚಾರ ಸರ್ಕಾರದ ಇಮೇಜ್‌ಗೆ ಮಸಿ ಬಳಿಯುವ ಯತ್ನವಾಗಿದೆ. ಈ ಬಗ್ಗೆ ನಾವು ಕಾನೂನುಬದ್ಧವಾಗಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com