ಕಾಂತಾರ ಧಗಧಗ: ಚಿತ್ರೀಕರಣ ವೇಳೆ ಅರಣ್ಯಾಧಿಕಾರಗಳ ದಿಢೀರ್ ಭೇಟಿ; ಈಶ್ವರ್ ಖಂಡ್ರೆ ವಾರ್ನಿಂಗ್ ಏನು?

ಹೆರೂರು ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿನ ಗೋಮಾಳ ಜಾಗದಲ್ಲಿ ಶೂಟಿಂಗ್‌ ಮಾಡಲು ಕಾಂತಾರ ಚಿತ್ರತಂಡ, ಅರಣ್ಯ ಇಲಾಖೆಯಿಂದ ಪರವಾನಗಿ ಪಡೆದುಕೊಂಡಿತ್ತು.
ಈಶ್ವರ್ ಖಂಡ್ರೆ
ಈಶ್ವರ್ ಖಂಡ್ರೆ
Updated on

ಕಾಂತಾರ ಚಿತ್ರ ಕನ್ನಡದ ಮೇರುಗನ್ನು ಮತ್ತಷ್ಟು ಹೆಚ್ಚಿಸಿತ್ತು. ಅಲ್ಲದೆ ಕಾಂತಾರ ಚಿತ್ರದಲ್ಲಿನ ಅಭಿನಯಕ್ಕಾಗಿ ರಿಷಬ್ ಶೆಟ್ಟಿ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದರು. ಇದೀಗ ಕಾಂತಾರ ಚಿತ್ರದ ಫ್ರಿಕ್ವೆಲ್ ನಿರ್ಮಾಣವಾಗುತ್ತಿದೆ. ಇದಕ್ಕಾಗಿ ರಿಷಬ್ ಶೆಟ್ಟಿ ಅರಣ್ಯ ಪ್ರದೇಶದಲ್ಲಿ ಭರ್ಜರಿ ಸೆಟ್ ಹಾಕಿ ಚಿತ್ರೀಕರಣ ನಡೆಸುತ್ತಿದ್ದಾರೆ.

ಆದರೆ ಕಾಂತಾರ ಚಿತ್ರಕ್ಕೆ ಈಗ ಶಾಕ್ ಎದುರಾಗಿದೆ. ಹೌದು ಕಾಂತಾರ ಚಿತ್ರದ ಸೆಟ್ ಗೆ ಅರಣ್ಯ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆರೂರು ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿನ ಗೋಮಾಳ ಜಾಗದಲ್ಲಿ ಶೂಟಿಂಗ್‌ ಮಾಡಲು ಕಾಂತಾರ ಚಿತ್ರತಂಡ, ಅರಣ್ಯ ಇಲಾಖೆಯಿಂದ ಪರವಾನಗಿ ಪಡೆದುಕೊಂಡಿತ್ತು. ಅದರಂತೆ ಚಿತ್ರೀಕರಣ ನಡೆಸುತ್ತದ್ದು ಈ ವೇಳೆ ಸ್ಫೋಟಕ ಬಳಸುತ್ತಿದ್ದು, ಇದರಿಂದ ವನ್ಯಜೀವಿಗಳು ವಿಚಲಿತವಾಗುತ್ತಿವೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿತ್ತು.

ಹೀಗಾಗಿ ಇಂದು ಅಧಿಕಾರಿಗಳು ಚಿತ್ರೀಕರಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ ಮತ್ತೊಮ್ಮೆ ಷರತ್ತುಗಳ ಉಲ್ಲಂಘನೆಯಾಗಿ, ವನ್ಯಜೀವಿಗಳಿಗೆ ಅಥವಾ ಕಾಡಿಗೆ ಯಾವುದೇ ಹಾನಿ ಆದರೆ ಕೂಡಲೇ ಚಿತ್ರೀಕರಣ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಈಶ್ವರ್ ಖಂಡ್ರೆ
ಉಡುಪಿ: ಕಾಂತಾರ ಚಿತ್ರತಂಡ ತೆರಳುತ್ತಿದ್ದ ಬಸ್ ಅಪಘಾತ; ಹಲವು ಕಲಾವಿದರಿಗೆ ಗಂಭೀರ ಗಾಯ

ಕಾಂತಾರ-2 ಚಿತ್ರೀಕರಣಕ್ಕೆ ವಿವಾದಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ. ಅರಣ್ಯ ಭೂಮಿಯಲ್ಲಿ ನಿಯಮ ಉಲ್ಲಂಘನೆಯಾಗಿಲ್ಲ ಎಂಬುದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ ಎಂದು ಸಚಿವರು ತಿಳಿಸಿದ್ದಾರೆ. ಸಿನಿಮಾ ಚಿತ್ರೀಕರಣಕ್ಕೆ ನಿಯಮಾವಳಿ ಪ್ರಕಾರ ಅನುಮತಿ ನೀಡಲಾಗಿದೆ. ನಮ್ಮ ಅರಣ್ಯ ಭೂಮಿಯಲ್ಲಿ ಚಿತ್ರೀಕರಣ ಮಾಡಿಲ್ಲ, ಕಂದಾಯ ಜಮೀನಿನಲ್ಲಿ ಮಾಡಿದ್ದಾರೆ. ಕಾಂತಾರ-2 ಚಿತ್ರತಂಡ ಷರತ್ತುಗಳನ್ನು ಉಲ್ಲಂಘಿಸಿದ್ರೆ ಚಿತ್ರೀಕರಣ ಸ್ಥಗಿತಗೊಳಿಸಲು ಕ್ರಮವಹಿಸುವಂತೆ ಅಪರ ಮುಖ್ಯ ಕಾರ್ಯದರ್ಶಿ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ನಿರ್ದೇಶಕರಿಗೆ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com