ಕಲಬುರಗಿ: ಕಾರಿಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರ ದುರ್ಮರಣ

ಮೃತರನ್ನು 40 ವರ್ಷದ ಸಂಜೀವ್, 26 ವರ್ಷದ ಅಭಿಷೇಕ್ ಮತ್ತು 24 ವರ್ಷದ ಅವಿನಾಶ್ ಎಂದು ಗುರುತಿಸಲಾಗಿದೆ.
ಅಪಘಾತದ ದೃಶ್ಯ
ಅಪಘಾತದ ದೃಶ್ಯ
Updated on

ಕಲಬುರಗಿ: ಚಿಂಚೋಳಿ ತಾಲೂಕಿನ ಮಗದಂಪುರ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮೃತರನ್ನು 40 ವರ್ಷದ ಸಂಜೀವ್, 26 ವರ್ಷದ ಅಭಿಷೇಕ್ ಮತ್ತು 24 ವರ್ಷದ ಅವಿನಾಶ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರಿನಲ್ಲಿದ್ದವರು ಬೀದರ್​ನಿಂದ ತೆಲಂಗಾಣದ ಧಾರೂರಿನತ್ತ ತೆರಳುತ್ತಿದ್ದರು. ಈ ವೇಳೆ ತೆಲಂಗಾಣದಿಂದ ಚಿಂಚೋಳಿ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಅಪಘಾತದ ದೃಶ್ಯ
ಮನುಷ್ಯತ್ವ ಮರೆತು ಕ್ರೌರ್ಯ: ವಿಜಯಪುರದಲ್ಲಿ ಕೆಲಸಕ್ಕೆ ತಡವಾಗಿ ಬಂದ ಕಾರ್ಮಿಕರ ಮೇಲೆ ಅಮಾನುಷ ಹಲ್ಲೆ; ನೋವಿನಿಂದ ಆಕ್ರಂದನ, Video!

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com