ಕಾರವಾರ: ಗರ್ಭಿಣಿ ಹಸುವನ್ನು ಕೊಂದು ಮಾಂಸ ಕದ್ದೊಯ್ದಿದ್ದ ಐವರು ಆರೋಪಿಗಳ ಬಂಧನ

ಹಸುವಿನ ತಲೆ ಕಡಿದು ಕೊಂದು ಮಾಂಸ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಕಾರವಾರ: ಗರ್ಭಿಣಿ ಹಸುವಿನ ತಲೆ ಕಡಿದು ಕೊಂದು ಮಾಂಸ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದಲ್ಲಿ ಘಟನೆ ನಡೆದಿದ್ದು ಮೂರು ದಿನಗಳ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಗೋಹಿಂಸೆ ಮತ್ತು ಗೋಹತ್ಯೆಯನ್ನ ಸರ್ಕಾರ ಯಾವುದೇ ಕಾರಣಕ್ಕೂ ಬೆಂಬಲಿಸಲ್ಲ. ಗೋ ಹಂತಕರು ಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ. ಗೋ ಮಾಂಸ ಸಾಗಾಟದ ಜಾಲ ಇದರೆ ಸಂಪೂರ್ಣ ಮಾಹಿತಿ ಕಲೆ ಹಾಕುವಂತೆ ಗೃಹ ಸಚಿವ ಪರಮೇಶ್ವರ್ ಸಭೆಯಲ್ಲಿ ಸೂಚನೆ ನೀಡಿದ್ದರು. ಇನ್ನು ಕಾರವಾರ ಘಟನೆ ನಂತರ ತನಿಖೆ ಕೈಗೊಂಡಿದ್ದ ಎಸ್​ಪಿ ಎಂ.ನಾರಾಯಣ ನೇತೃತ್ವದ ತಂಡ ಇದುವರೆಗೆ ಐವರು ಗೋಹಂತಕರನ್ನು ಬಂಧಿಸಿದ್ದಾರೆ.

ಹೊನ್ನಾವರ ತಾಲೂಕಿನ ಸಾಲ್ಕೋಡು ಗ್ರಾಮದ ಕೃಷ್ಣ ಆಚಾರಿ ಎಂಬುವರು ಹಸುವನ್ನು ಮೇಯಲು ಕಾಡಿಗೆ ಬಿಟ್ಟಿದ್ದರು. ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ ಹುಡುಕಾಟ ನಡೆಸಿದ್ದಾಗ ಗೋವನ್ನು ಹತ್ಯೆ ಮಾಡಿರುವ ಕುರುಹು ಪತ್ತೆಯಾಗಿತ್ತು. ಹಸುವನ್ನು ಕೊಂದಿದ್ದ ದುರುಳರು ಹಸುವಿನ ಹೊಟ್ಟೆಯಲ್ಲಿದ್ದ ಕರುವಿನ ಮಾಂಸವನ್ನು ಹೊತ್ತೊಯ್ದಿದ್ದು ಈ ಘಟನೆ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಸಂಗ್ರಹ ಚಿತ್ರ
ಉತ್ತರ ಕನ್ನಡದಲ್ಲಿ ಅಮಾನವೀಯ ಘಟನೆ: ಗರ್ಭಿಣಿ ಹಸುವಿನ ತಲೆ-ಕಾಲು ಕಡಿದು ಹತ್ಯೆ; ಪ್ರಕರಣ ದಾಖಲು

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com