ದಾವೋಸ್ ವಿಶ್ವ ಆರ್ಥಿಕ ವೇದಿಕೆ: ಕಾಂಗ್ರೆಸ್‌ ಒಳಜಗಳದಿಂದ ಕರ್ನಾಟಕದ ಪ್ರತಿನಿಧಿ ಇಲ್ಲದಂತಾಗಿದೆ; ಬಿಜೆಪಿ ಟೀಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸೇರಿದಂತೆ ಇಡೀ ಸಂಪುಟ ಕೊಳಕು ಅಧಿಕಾರ ರಾಜಕಾರಣದಲ್ಲಿ ಮುಳುಗಿದ್ದಾರೆ.
R. ASHOK
ವಿಪಕ್ಷ ನಾಯಕ ಆರ್.ಅಶೋಕ್
Updated on

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಕಚ್ಚಾಟದಿಂದ ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯಲ್ಲಿ (WEF) ಕರ್ನಾಟಕವನ್ನು ಯಾರು ಪ್ರತಿನಿಧಿಸದಂತಾಗಿದೆ ಎಂದು ಬಿಜೆಪಿ ಬುಧವಾರ ಹೇಳಿದೆ.

ಅಂತಾರಾಷ್ಟ್ರೀಯ ವೇದಿಕೆಯಲ್ಲಿ ರಾಜ್ಯದ ಯಾವುದೇ ಪ್ರತಿನಿಧಿ ಹಾಜರಾಗದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ದೇಶದ ಪ್ರಮುಖ ರಾಜ್ಯಗಳ ಮುಖ್ಯಮಂತ್ರಿಗಳು ದಾವೋಸ್‌ನಲ್ಲಿದ್ದು, ತಮ್ಮ ರಾಜ್ಯಗಳಿಗೆ ಹೂಡಿಕೆಗೆ ಬಲವಾದ ಪ್ರಯತ್ನ ನಡೆಸುತ್ತಿರುವಾಗ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅಥವಾ ಅವರ ಸಂಪುಟ ಸಹೋದ್ಯೋಗಿಗಳು ರಾಜ್ಯವನ್ನು ಪ್ರಮುಖ ವಿಶ್ವ ವೇದಿಕೆಯಲ್ಲಿ ಪ್ರತಿನಿಧಿಸಲು ಆಸಕ್ತಿ ತೋರಿಲ್ಲ ಎಂದು ಟೀಕಿಸಿದರು.

ರಹಸ್ಯ ಅಧಿಕಾರ ಹಂಚಿಕೆ ಒಪ್ಪಂದಕ್ಕೆ ಧನ್ಯವಾದಗಳು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸೇರಿದಂತೆ ಇಡೀ ಸಂಪುಟ ಕೊಳಕು ಅಧಿಕಾರ ರಾಜಕಾರಣದಲ್ಲಿ ಮುಳುಗಿದ್ದಾರೆ. ಇದು ಕರ್ನಾಟಕದ ಆರ್ಥಿಕತೆ ಮತ್ತು ಆಡಳಿತವನ್ನು ಸಂಪೂರ್ಣವಾಗಿ ಸ್ತಬ್ಧಗೊಳಿಸಿದೆ ಎಂದು ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಹಿರಿಯ ನಾಯಕಿ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಜೀವಂತವಾಗಿಡಲು ATM ಬೇಕು ಎಂಬ ಕಾರಣಕ್ಕೆ ಕರ್ನಾಟಕದಲ್ಲಿ ಯಾವುದೇ ಬೆಲೆ ತೆತ್ತಾದರೂ ಅಧಿಕಾರದಲ್ಲಿರಲು ಬಯಸುತ್ತಾರೆ. ಆದರೆ ರಾಜ್ಯದ ಜನರ ಸೇವೆ ಮಾಡಲು ಬಯಸಲ್ಲ,. ಅದೇ ಈ ಅವ್ಯವಸ್ಥೆಯ ಮೂಲವಾಗಿದೆ ಎಂದು ಟೀಕಿಸಿದರು.

R. ASHOK
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಉತ್ತರ ಕರ್ನಾಟಕ ನಿರ್ಲಕ್ಷ್ಯ: ಆರ್. ಅಶೋಕ್

ಜನವರಿ 21 ರಂದು ದಾವೋಸ್ ನಲ್ಲಿ ಆರಂಭವಾದ ವಿಶ್ವ ಆರ್ಥಿಕ ವೇದಿಕೆ (WEF)ನಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಮಹಾರಾಷ್ಟ್ರ ಸಿಎಂ ಫಡ್ನವೀಸ್, ತೆಲಂಗಾಣದ ರೇವಂತ್ ರೆಡ್ಡಿ ಮತ್ತಿತರ ದೇಶದ ಹಲವು ಗಣ್ಯರು ಪಾಲ್ಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com