ಯಲ್ಲಾಪುರ ಬಳಿ ಭೀಕರ ಅಪಘಾತ: ಪ್ರಧಾನಿ ಮೋದಿ, ಅಮಿತ್ ಶಾ ಸಂತಾಪ; 2 ಲಕ್ಷ ರೂ ಪರಿಹಾರ ಘೋಷಣೆ

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ.
PM Modi, Amitsha Casual Images
ಪ್ರಧಾನಿ ಮೋದಿ, ಅಮಿತ್ ಶಾ ಸಾಂದರ್ಭಿಕ ಚಿತ್ರ
Updated on: 

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಫುರ ಬಳಿ ಬುಧವಾರ ಬೆಳಗಿನ ಜಾವ ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 11 ಮಂದಿ ಮೃತಪಟ್ಟಿದ್ದು, ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಿಂದ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಅವರು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

PM Modi, Amitsha Casual Images
ಯಲ್ಲಾಪುರದಲ್ಲಿ ಭೀಕರ ರಸ್ತೆ ಅಪಘಾತ: ಲಾರಿ ಪಲ್ಟಿಯಾಗಿ 11 ಮಂದಿ ದುರ್ಮರಣ; ಮೃತರ ಕುಟುಂಬಕ್ಕೆ 3 ಲಕ್ಷ ರೂ ಪರಿಹಾರ ಘೋಷಣೆ; Video

ಮೃತರ ಪ್ರತಿ ಕುಟುಂಬಕ್ಕೂ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.

ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಹ ಯಲ್ಲಾಪುರದ ಅಪಘಾತಕ್ಕೆ ಸಂತಾಪ ಸೂಚಿಸಿದ್ದಾರೆ. ಉತ್ತರ ಕನ್ನಡದ ಯಲ್ಲಾಪುರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅಮೂಲ್ಯ ಜೀವಗಳು ಬಲಿಯಾಗಿದ್ದು, ಈ ಘಟನೆಯಿಂದ ಬಹಳ ದುಃಖವಾಗಿದೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪಗಳು ಹಾಗೂ ಈ ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com