
ರಾಯಚೂರು: ರಾಯಚೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿ 18 ಮಂದಿಗೆ ಗಾಯವಾಗಿರುವ ಘಟನೆ ರಾಯಚೂರಿನ ಬನ್ನಿಗೋಳ ಹೊರವಲಯದಲ್ಲಿ ಗುರುವಾರ ನಡೆದಿದೆ.
ನಿನ್ನೆಯಷ್ಟೇ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅಪಘಾತ ಸಂಭವಿಸಿದೆ.
ಕೆಎಸ್ಆರ್ಟಿಸಿ ಬಸ್ ಮತ್ತು ಟ್ರ್ಯಾಕ್ಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಲಿಂಗಸಗೂರು ತಾಲೂಕಿನ ಬನ್ನಿಗೋಳ ಗ್ರಾಮದ ನಿವಾಸಿ ಶ್ರೀದೇವಿ (19) ಎಂಬ ಮಹಿಳೆ ಮೃತಪಟ್ಟಿದ್ದಾರೆ.
ಕೆಎಸ್ಆರ್ಟಿಸಿ ಬಸ್ ಅಂಕಲಿಮಠದಿಂದ ಮುದ್ಗಲ್ ಕಡೆ ಹೊರಟಿತ್ತು. ಮತ್ತೊಂದೆಡೆ ಟ್ರ್ಯಾಕ್ಟರ್ ಬನ್ನಿಗೋಳದಿಂದ ಕೂಲಿ ಕಾರ್ಮಿಕರನ್ನ ಕರೆದೊಯ್ಯುತ್ತಿತ್ತು. ಈ ವೇಳೆ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಗೆ ಡಿಕ್ಕಿ ಹೊಡೆದಿದೆ. ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಲಿಂಗಸಗೂರು & ಮುದ್ಗಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಮುದ್ಗಲ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Advertisement