ಮಂಡ್ಯದಲ್ಲಿ ಸಮಗ್ರ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ರೈತರ ಬಹುದಿನಗಳ ಬೇಡಿಕೆಯಾಗಿರುವ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಜಾರಿಗೆ ತರುವಂತೆ ಸಿಎಂ, ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Updated on

ಬೆಂಗಳೂರು: ಕೃಷಿ ಆಧಾರಿತ ಮಂಡ್ಯ ಜಿಲ್ಲೆಯಲ್ಲಿ ಸಮಗ್ರ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

ಈ ವಿಶ್ವವಿದ್ಯಾಲಯವು ಕೃಷಿ, ತೋಟಗಾರಿಕೆ ಮತ್ತು ಪಶುಸಂಗೋಪನೆ ಕೋರ್ಸ್‌ಗಳನ್ನು ನೀಡಲಿದ್ದು, ಮಂಡ್ಯ, ಹಾಸನ, ಮೈಸೂರು ಮತ್ತು ಚಾಮರಾಜನಗರ ಪ್ರದೇಶಗಳ ರೈತರಿಗೆ ಸಾವಯವ ಮತ್ತು ಧಾನ್ಯ ಕೃಷಿಗಾಗಿ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಲಿದೆ ಎಂದು ತಿಳಿಸಿದರು.

ಇಂದು ನಗರದ ಅರಮನೆ ಮೈದಾನದಲ್ಲಿ ನಡೆದ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ -2025 ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ, ರೈತರ ಬಹುದಿನಗಳ ಬೇಡಿಕೆಯಾಗಿರುವ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಜಾರಿಗೆ ತರುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

"ಭಾರತ ಕೃಷಿ ದೇಶ ಮತ್ತು ನಾವು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿದ್ದೇವೆ. ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಆಹಾರದ ಕೊರತೆ ಇತ್ತು. ಆದರೆ ಈಗ, ಭಾರತವು ಅನೇಕ ಆಹಾರ ಧಾನ್ಯಗಳನ್ನು ರಫ್ತು ಮಾಡುತ್ತಿರುವುದು ಹೆಮ್ಮೆಯ ವಿಷಯ" ಎಂದು ಸಿಎಂ ಹೇಳಿದರು.

ಕೃಷಿ ಕುಟುಂಬಕ್ಕೆ ಸೇರಿದ ತಮ್ಮ ಕುಟುಂಬವು ಧಾನ್ಯಗಳನ್ನು ಬೆಳೆಯುತ್ತಿದೆ ಎಂದ ಸಿಎಂ ಸಿದ್ದರಾಮಯ್ಯ, ಧಾನ್ಯ ಉತ್ಪಾದನೆಯಲ್ಲಿ ಕರ್ನಾಟಕ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ
'ವ್ಯವಸಾಯವೂ ಒಂದು ವ್ಯಾಪಾರ, ರೈತರು ಬದುಕು ಕಟ್ಟಿಕೊಳ್ಳಲು ಮಾರ್ಗದರ್ಶನ ಅವಶ್ಯಕ; ಶೋಭಾ ಕರಂದ್ಲಾಜೆ ಕೃಷಿ ಸಚಿವರಾಗಿದ್ದು ನಮ್ಮ ಭಾಗ್ಯ'

"ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭಾರತದಲ್ಲಿ ಧಾನ್ಯಗಳ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಿವೆ. ವಿಶ್ವದಲ್ಲಿ ಅಂದಾಜು 903.61 ಲಕ್ಷ ಟನ್ ಧಾನ್ಯ ಉತ್ಪಾದಿಸಲಾಗುತ್ತಿದೆ. ಅದರಲ್ಲಿ ಶೇ. 38.50 ರಷ್ಟು ನಮ್ಮ ದೇಶದ್ದು, ಭಾರತ, ವಿಶ್ವದ ಅತಿದೊಡ್ಡ ಧಾನ್ಯ ಉತ್ಪಾದಕ ರಾಷ್ಟ್ರವಾಗಿದೆ" ಎಂದು ಹೇಳಿದರು.

ಭಾರತವು ಸಾವಯವ ಕೃಷಿ ಪ್ರದೇಶದಲ್ಲಿ ವಿಶ್ವದಲ್ಲಿ ಎರಡನೇ ಸ್ಥಾನದಲ್ಲಿದೆ ಮತ್ತು ಒಟ್ಟು ಸಾವಯವ ಉತ್ಪಾದಕರಲ್ಲಿ ಮೊದಲ ಸ್ಥಾನದಲ್ಲಿದೆ ಎಂದರು.

ಸಾವಯವ ಕೃಷಿ ವ್ಯವಸ್ಥೆಯ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಲು 2013 ರಲ್ಲಿ ರಾಜ್ಯವು "ಸಾವಯವ ಭಾಗ್ಯ ಯೋಜನೆ"ಯನ್ನು ಪ್ರಾರಂಭಿಸಿತು. ಹೋಬಳಿ ಮಟ್ಟದಲ್ಲಿ ಮಾದರಿ ಸಾವಯವ ಗ್ರಾಮಗಳನ್ನು ಘೋಷಿಸಲಾಯಿತು ಮತ್ತು ರೈತರಿಗೆ ಪ್ರೋತ್ಸಾಹಿಸಲಾಯಿತು ಎಂದು ಸಿಎಂ ಹೇಳಿದರು.

ಎಪಿಎಂಸಿ ಗಳಲ್ಲಿ ಮಾರುಕಟ್ಟೆ ವ್ಯವಸ್ಥೆ

ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿ ಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ನಮ್ಮ ಸರ್ಕಾರ ಸಿರಿಧಾನ್ಯಗಳ ಕೃಷಿ, ಮಾರುಕಟ್ಟೆ ಹಾಗೂ ಇತರೆ ಸೌಲಭ್ಯಗಳನ್ನು ನೀಡುವ ಮೂಲಕ ಸಿರಿಧಾನ್ಯ ಕೃಷಿಯ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲು ಬದ್ಧವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com