
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶುಕ್ರವಾರ ಸಿಹಿ ಸುದ್ದಿ ನೀಡಿದ್ದು, ಭಾನುವಾರ ಗಣರಾಜ್ಯೋತ್ಸವದ ಅಂಗವಾಗಿ ರೈಲು ಸಂಚಾರವನ್ನು ಬೆಳಗ್ಗೆ 6 ಗಂಟೆಗೆ ಆರಂಭಿಸಲಾಗುತ್ತಿದೆ.
ಭಾನುವಾರ ನಮ್ಮ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆಯ ಬದಲಿಗೆ ಬೆಳಗ್ಗೆ 6 ಗಂಟೆಯಿಂದಲೇ ಕಾರ್ಯಾರಂಭ ಮಾಡಲಿವೆ. ನಾಲ್ಕೂ ಟರ್ಮಿನಲ್ಗಳಿಂದ ಮತ್ತು ಮೆಜೆಸ್ಟಿಕ್ನಿಂದ ಮೊದಲ ರೈಲು ಬೆಳಗ್ಗೆ 6 ಗಂಟೆಗೆ ಹೊರಡಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ(BMRCL) ತಿಳಿಸಿದೆ.
ಗಣರಾಜ್ಯೋತ್ಸವದ ಅಂಗವಾಗಿ ನಡೆಯುತ್ತಿರುವ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ಮತ್ತು ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ(BIEC) ನಡೆಯುತ್ತಿರುವ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಹೋಗಲು ಅನುಕೂಲವಾಗುವಂತೆ ಹೆಚ್ಚುವರಿಯಾಗಿ 20 ರೈಲುಗಳು ಸಂಚಾರ ಮಾಡಲಿವೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.
ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಟೋಕನ್ ಬದಲಿಗೆ ಪೇಪರ್ ಟಿಕೆಟ್ ನೀಡಲಾಗುತ್ತದೆ. ಫ್ಲಾಟ್ 30 ರೂಪಾಯಿಯಂತೆ ಪೇಪರ್ ಟಿಕೆಟ್ ವಿತರಣೆ ಮಾಡಲಾಗುತ್ತದೆ. ಈ ಪೇಪರ್ ಟಿಕೆಟ್ಗಳ ಮೂಲಕ ಲಾಲ್ಬಾಗ್ನಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಅವಕಾಶ ನೀಡಲಾಗುತ್ತದೆ ಎಂದು ಬಿಎಂಆರ್ ಸಿಎಲ್ ಹೇಳಿದೆ.
Advertisement