ಯಂತ್ರೋಪಕರಣ ಕ್ಷೇತ್ರಕ್ಕೆ 5 ದಶಕಗಳ ಹಿಂದೆಯೇ ಕರ್ನಾಟಕ ಬಲಿಷ್ಠ ಅಡಿಪಾಯ ಹಾಕಿದೆ: HDK

ಕರ್ನಾಟಕವು ಭಾರತದ ಯಂತ್ರೋಪಕರಣಗಳಲ್ಲಿ ಶೇ.50ರಷ್ಟು ಉತ್ಪಾದನೆ ಪಾಲು ಹೊಂದಿದೆ. ಈ ರಾಜ್ಯವು ದೇಶದ ಯಂತ್ರೋಪಕರಣಗಳ ರಾಜಧಾನಿ ಎಂದು ಬಣ್ಣಿಸಿದರು.
ಎಚ್ ಡಿ ಕುಮಾರಸ್ವಾಮಿ ಹಾಗೂ ಎಂಬಿ ಪಾಟೀಲ್.
ಎಚ್ ಡಿ ಕುಮಾರಸ್ವಾಮಿ ಹಾಗೂ ಎಂಬಿ ಪಾಟೀಲ್.
Updated on

ಬೆಂಗಳೂರು: ಸದೃಢ ಉತ್ಪಾದನಾ ವಲಯಕ್ಕೆ ಬಲಿಷ್ಠ ಯಂತ್ರೋಪಕರಣಗಳ ಉದ್ಯಮ ಅತ್ಯಗತ್ಯ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಗುರುವಾರ ಹೇಳಿದರು.

ಗುರುವಾರ ಇಲ್ಲಿನ ತುಮಕೂರು ರಸ್ತೆಯಲ್ಲಿನ ಬೆಂಗಳೂರಿನ ಅಂತರ ರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಏರ್ಪಡಿಸಿದ್ದ ಭಾರತೀಯ ಯಂತ್ರೋಪಕರಣ ತಂತ್ರಜ್ಞಾನ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯಂತ್ರೋಪಕರಣಗಳ ಉದ್ಯಮವು ಬಂಡವಾಳ ಸರಕು ಕ್ಷೇತ್ರದ ಮೂಲಾಧಾರವಾಗಿದ್ದು, ಯಂತ್ರೋಪಕರಣ ಕ್ಷೇತ್ರಕ್ಕೆ 5 ದಶಕಗಳ ಹಿಂದೆಯೇ ಕರ್ನಾಟಕ ಬಲಿಷ್ಟವಾದ ಅಡಿಪಾಯ ಹಾಕಿದೆ. ಹಿಂದೂಸ್ತಾನ್ ಮಷಿನ್ ಅಂಡ್ ಟೂಲ್ಸ್ ಈ ಕ್ಷೇತ್ರಕ್ಕೆ ಮಹೋನ್ನತ ಕೊಡುಗೆಯನ್ನು ನೀಡಿ, ಉತ್ಪಾದನಾ ಕ್ಷೇತ್ರದಲ್ಲಿ ಅನೇಕ ಮೈಲುಗಲ್ಲುಗಳನ್ನು ಸ್ಥಾಪಿಸಿತ್ತು. ಆಗಿನಿಂದಲೇ ಕರ್ನಾಟಕವು ನಾವೀನ್ಯತೆ ಮತ್ತು ಉತ್ಪಾದನಾ ಉತ್ಕೃಷ್ಟತೆಯನ್ನು ಪ್ರೊತ್ಸಾಹಿಸುವುದನ್ನು ಮುಂದುವರೆಸಿದೆ. ಪ್ರಸ್ತುತ, ಯಂತ್ರೋಪಕರಣ ಕ್ಷೇತ್ರಕ್ಕೆ ಪ್ರಧಾನಿ ಮೋದಿ ಅವರ ಸರ್ಕಾರ ಎಲ್ಲಾ ಆಯಾಮಗಳಲ್ಲಿಯೂ ಉತ್ತೇಜನ ನೀಡುತ್ತಿದೆ ಎಂದು ಹೇಳಿದರು.

ಅಲ್ಲದೆ, ಕರ್ನಾಟಕವು ಭಾರತದ ಯಂತ್ರೋಪಕರಣಗಳಲ್ಲಿ ಶೇ.50ರಷ್ಟು ಉತ್ಪಾದನೆ ಪಾಲು ಹೊಂದಿದೆ. ಈ ರಾಜ್ಯವು ದೇಶದ ಯಂತ್ರೋಪಕರಣಗಳ ರಾಜಧಾನಿ ಎಂದು ಬಣ್ಣಿಸಿದರು.

ಎಚ್ ಡಿ ಕುಮಾರಸ್ವಾಮಿ ಹಾಗೂ ಎಂಬಿ ಪಾಟೀಲ್.
HMT ಕಾರ್ಖಾನೆ ಪುನಶ್ಚೇತನ; ನಿವೃತ್ತ ಕಾರ್ಮಿಕರಿಗೆ 361 ಕೋಟಿ ರೂ ವೇತನ ಬಾಕಿ ಪಾವತಿಗೆ ಕ್ರಮ: HDK

ತಂತ್ರಜ್ಞಾನದ ಉನ್ನತೀಕರಣ ಮತ್ತು ಮೂಲಸೌಕರ್ಯ ಅಭಿವೃದ್ಧಿಯ ಬಗ್ಗೆ ಭಾರತ ಸ್ಪಷ್ಟ ಗುರಿಯನ್ನು ಹೊಂದಿದ್ದು, ಆ ನಿಟ್ಟಿನಲ್ಲಿ ಬಂಡವಾಳ ಸರಕುಗಳ ವಲಯದಲ್ಲಿ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ಮಹತ್ವದ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದೆ.

ಬೃಹತ್ ಕೈಗಾರಿಕೆ ಸಚಿವಾಲಯವು ತುಮಕೂರಿನಲ್ಲಿ ಮಷಿನ್ ಅಂಡ್ ಟೂಲ್ ಪಾರ್ಕ್ ಸ್ಥಾಪನೆಗೆ ಉತ್ತೇಜನ ನೀಡಿದೆ ಮತ್ತು ಐಐಟಿ-ಮದ್ರಾಸ್‍ನಲ್ಲಿ ಸುಧಾರಿತ ಉತ್ಪಾದನಾ ತಂತ್ರಜ್ಞಾನ ಅಭಿವೃದ್ಧಿ ಕೇಂದ್ರದಂತಹ ಉತ್ಕೃಷ್ಟತೆಯ ಕೇಂದ್ರಗಳನ್ನು ಸ್ಥಾಪಿಸಲು ಪಾಲುದಾರಿಕೆ ಹೊಂದಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಬಂಡವಾಳ ಸರಕುಗಳ ನೀತಿ-2025 ರೂಪಿಸಲು ನಮ್ಮ ಸಚಿವಾಲಯ ಕೆಲಸ ಮಾಡುತ್ತಿದೆ. ಈ ವಲಯದಲ್ಲಿ ಭಾರತವನ್ನು ಜಾಗತಿಕ ಶಕ್ತಿಯನ್ನಾಗಿ ಮಾಡುವತ್ತ ಮೋದಿ ಅವರ ನೇತೃತ್ವದಲ್ಲಿ ಪ್ರಯತ್ನ ಮಾಡುತ್ತಿದ್ದೇವೆ. ಆದಷ್ಟು ಬೇಗ ಈ ನೀತಿಯು ಹೊರಬರಲಿದೆ ಎಂದು ಭರವಸೆ ನೀಡಿದರು.

ರಾಷ್ಟ್ರೀಯ ಬಂಡವಾಳ ಸರಕುಗಳ ನೀತಿಯು ನಾವೀನ್ಯತೆಯನ್ನು ಉತ್ತೇಜಿಸಲು, ಆಮದು ಮೇಲಿನ ಅವಲಂಬನೆ ಕಡಿಮೆ ಮಾಡಲು ಮತ್ತು ಸ್ಪರ್ಧಾತ್ಮಕತೆ ಹೆಚ್ಚಿಸಲು ವ್ಯವಸ್ಥಿತವಾದ ಚೌಕಟ್ಟು ಒದಗಿಸಲಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com