
ಗುಂಡ್ಲುಪೇಟೆ: ಕೆಎಸ್ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ವಾಂತಿ ಮಾಡಲು ಕಿಟಕಿಯಿಂದ ತಲೆ ಹೊರಗೆ ಹಾಕಿದ ವೇಳೆ ಓವರ್ ಟೇಕ್ ಮಾಡುತ್ತಿದ್ದ ಟಿಪ್ಪರ್ ತಗುಲಿ ಮಹಿಳೆಯ ರುಂಡ ಕಟ್ ಆಗಿ ಬಿದ್ದಿರುವ ಆಘಾತಕಾರಿ ಘಟನೆ ಶನಿವಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ.
ಗುಂಡ್ಲುಪೇಟೆಯಿಂದ ನಂಜನಗೂಡು ಕಡೆಗೆ ಹೊರಟ್ಟಿದ್ದ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಅಚಾನಕ್ ಆಗಿ ತಮ್ಮ ತಲೆಯನ್ನು ಕಿಟಕಿಯಿಂದ ಹೊರ ಹಾಕಿದ್ದು, ಈ ವೇಳೆ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟಿದ್ದಾರೆ ಎಂದು ಚಾಮರಾಜನಗರ ಪೊಲೀಸರು ತಿಳಿಸಿದ್ದಾರೆ.
ಮೃತ ಮಹಿಳೆಯನ್ನು ಬೇಗೂರು ಸಮೀಪದ ಆಲಹಳ್ಳಿ ಗ್ರಾಮದ ಶಿವಲಿಂಗಮ್ಮ (43) ಎಂದು ಗುರುತಿಸಲಾಗಿದೆ.
ಈ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತದ ನಂತರ, ಕೆಎಸ್ಆರ್ ಟಿಸಿ ವಿಭಾಗೀಯ ನಿಯಂತ್ರಕ, ಡಿಎಂಇ, ಡಿಟಿಒ ಮತ್ತು ಎಸ್‌ಒ ಸೇರಿದಂತೆ ಮೈಸೂರು ನಗರ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
Advertisement