'ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್' ಜಾರಿ: ದೇಶದಲ್ಲೇ ಮೊದಲ ಪ್ರಯೋಗ- ಪ್ರಿಯಾಂಕ್ ಖರ್ಗೆ

ಈ ಕಾರ್ಯಕ್ರಮವನ್ನು ಜಾರಿಗೆ ತರುವುದಾಗಿ ಹಿಂದಿನ ಬಜೆಟ್‌ನಲ್ಲಿ ಘೋಷಿಸಲಾಗಿತ್ತು.
ಫೆಲೋಗಳೊಂದಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಭೆ
ಫೆಲೋಗಳೊಂದಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಭೆ
Updated on

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 'ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್' ಕಾರ್ಯಕ್ರಮವನ್ನು ಜಾರಿಗೊಳಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ಹೇಳಿದರು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, 'ಈ ಕಾರ್ಯಕ್ರಮವನ್ನು ಜಾರಿಗೆ ತರುವುದಾಗಿ ಹಿಂದಿನ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಹಿಂದುಳಿದ ಪ್ರದೇಶವಾದ ಕಲ್ಯಾಣ ಕರ್ನಾಟಕದಲ್ಲಿ ಸ್ಥಳೀಯ ಆಡಳಿತವನ್ನು ಬಲಪಡಿಸುವ ಉದ್ದೇಶದಿಂದ ಉತ್ಸಾಹಿ ಹಾಗೂ ಪ್ರತಿಭಾವಂತ ಯುವ ಸಮುದಾಯಕ್ಕೆ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ' ಎಂದು ಹೇಳಿದ್ದಾರೆ.

ಸಾಮಾಜಿಕ ಕ್ಷೇತ್ರದಲ್ಲಿ ಆಸಕ್ತಿ ಇರುವ ಪದವೀಧರರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಫೆಲೋಗಳು ಕಲ್ಯಾಣ ಕರ್ನಾಟಕ ಭಾಗದ ಸಾಮಾಜಿಕ, ಭೌಗೋಳಿಕ, ಆರ್ಥಿಕ ಹಾಗೂ ಆಡಳಿತಾತ್ಮಕ ಸನ್ನಿವೇಶಗಳನ್ನು ಅರ್ಥೈಸಿಕೊಂಡು ಜಿಲ್ಲಾಡಳಿತದೊಂದಿಗೆ ಕ್ರಿಯಾಶೀಲರಾಗಬೇಕಾಗುತ್ತದೆ. ಇದರ ಅಡಿಯಲ್ಲಿ 44 ಫೆಲೋಗಳು ತರಬೇತಿ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ಸರ್ಕಾರದ ಕಾರ್ಯಕ್ರಮಗಳು ಜನತೆಗೆ ತಲುಪಿಸುವಲ್ಲಿ ಫೆಲೋಗಳು ಆಸಕ್ತಿಯಿಂದ ಕೆಲಸ ಮಾಡಿದ್ದಾರೆ. ಈ ಉತ್ಸಾಹಿ ಫೆಲೋಗಳು ಕೆಲವೇ ತಿಂಗಳುಗಳಲ್ಲಿ ಇಂತಹ ಮಹತ್ತರವಾದ ಕೆಲಸವನ್ನು ಮಾಡಿರುವುದು ಇಲಾಖೆಗೆ ಲಾಭದಾಯಕವಾಗಿದೆ ಎಂದು ಖರ್ಗೆ ಹೇಳಿದರು.

ಫೆಲೋಗಳು 39 ಅರಿವು ಕೇಂದ್ರಗಳನ್ನು ಪುನರಾರಂಭಿಸುವಲ್ಲಿ ಶ್ರಮ ವಹಿಸಿದ್ದಾರೆ ಹಾಗೂ 56 ಅರಿವು ಕೇಂದ್ರಗಳ ದಿನಪತ್ರಿಕೆ, ಮ್ಯಾಗಜಿನ್‌ಗಳು ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಿದ್ದಾರೆ. ನಿರ್ಲಕ್ಷ್ಯಕ್ಕೆ ಒಳಗಾಗಿ ಮುಚ್ಚಿ ಹೋಗಿದ್ದ 116 ಕೂಸಿನ ಮನೆಗಳನ್ನು ಪುನರಾರಂಭಿಸಿದ್ದಾರೆ. ಫೆಲೋಗಳ ಆಸಕ್ತಿ ಹಾಗೂ ಶ್ರಮದಿಂದ 66 ಕೂಸಿನ ಮನೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದಿದ್ದಾರೆ.

95 ಕೂಸಿನ ಮನೆ ನಿರ್ವಹಣೆಯಲ್ಲಿ ಸುಧಾರಣೆ ಕಂಡಿದೆ. 86 ಕೂಸಿನ ಮನೆಗಳಲ್ಲಿ ಪೌಷ್ಟಿಕ ಆಹಾರ ಒದಗಿಸುವಲ್ಲಿ ಕ್ರಮ ವಹಿಸಿದ್ದಾರೆ. 61 ಗ್ರಾಮ ಪಂಚಾಯಿತಿಗಳಲ್ಲಿ ಕಸ ಸಂಗ್ರಹಣೆ ಮತ್ತು ಕಸ ವಿಂಗಡಣೆಯ ವ್ಯವಸ್ಥೆ ಮಾಡಿದ್ದಾರೆ. 23 ಗ್ರಾಮ ಪಂಚಾಯಿತಿಗಳಲ್ಲಿ ತ್ಯಾಜ್ಯ ನಿರ್ವಹಣಾ ಶುಲ್ಕ ಸಂಗ್ರಹಕ್ಕೆ ಕ್ರಮ ವಹಿಸಿದ್ದಾರೆ. ನಮ್ಮ ಸರ್ಕಾರದ ರಾಜೀವ್ ಗಾಂಧಿ ಫೆಲೋಶಿಪ್ ಕಾರ್ಯಕ್ರಮದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಗ್ರಾಮ ಮಟ್ಟದಲ್ಲಿ ಉತ್ತಮ ಕೆಲಸವಾಗುತ್ತಿರುವುದಕ್ಕೆ ಈ ಉತ್ಸಾಹಿ ಫೆಲೋಗಳ ಶ್ರಮ ಮತ್ತು ಆಸಕ್ತಿ ಮಹತ್ತರ ಪಾತ್ರವಿದೆ ಎಂದು ಹೇಳಿದ್ದಾರೆ.

ಫೆಲೋಗಳು ಮಾಡಿದ ಕೆಲಸಗಳ ಪಟ್ಟಿ ಇಲ್ಲಿದೆ

  • 197 ಜನರಲ್ ಬಾಡಿ ಮೀಟಿಂಗ್‌ಗಳನ್ನು ಆಯೋಜಿಸಿದ್ದಾರೆ.

  • 104 ಗ್ರಾಮ ಪಂಚಾಯತ್ ಗಳಲ್ಲಿ ಸಭೆಯ ಮಾಹಿತಿಯನ್ನು ಪಿ2.0 ನಲ್ಲಿ ಅಪ್ಲೋಡ್ ಮಾಡಲು ಕ್ರಮ ವಹಿಸಿದ್ದಾರೆ

  • 81 ವಾರ್ಡ್ ಸಭೆ, ಗ್ರಾಮ ಸಭೆಯನ್ನು ನಿರ್ವಹಿಸಿದ್ದಾರೆ

  • ಫೆಲೋಗಳ ಇಚ್ಛಾಶಕ್ತಿಯಲ್ಲಿ 508 ಸಬ್ ಕಮಿಟಿಗಳು ರಚನೆಯಾಗಿವೆ

  • ಓದುವ ಸಂಸ್ಕೃತಿಯನ್ನು ಹೆಚ್ಚಿಸಲು ಪುಸ್ತಕ ಗೂಡು ಎಂಬ ವಿನೂತನ ಮಾದರಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com