ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವ ಸಂಭ್ರಮ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಧ್ವಜಾರೋಹಣ

ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ ಮಾಡಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌
Updated on

ಬೆಂಗಳೂರು: ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಿದರು.

ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ ಮಾಡಿದರು.

ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಡಿನ ಸಮಸ್ತ ಜನತೆಗೆ 76ನೇ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು.

ಬಳಿಕ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಕೊಂಡಾಡಿದ ಅವರು, ಜನರ ಸಂಕಷ್ಟಗಳನ್ನು ಅರಿತು ಸರ್ಕಾರ ಜಾರಿಗೆ ತಂದ 5 ಗ್ಯಾರಂಟಿ ಕಲ್ಯಾಣ ಯೋಜನೆಗಳು ಯಶಸ್ವಿಯಾಗಿದ್ದು, ದೇಶದ ಗಮನ ಸೆಳೆದಿವೆ ಎಂದು ಹೇಳಿದರು.

5 ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಬಿಕ್ಕಟ್ಟು ಉಂಟಾಗುತ್ತದೆ. ಅಭಿವೃದ್ಧಿ ಕುಂಠಿತವಾಗುತ್ತದೆ ಎಂಬ ಭವಿಷ್ಯವೂ ಸುಳ್ಳಾಗಿದೆ. ಕರ್ನಾಟಕ ರಾಜ್ಯವು ಆರ್ಥಿಕ ಬೆಳವಣಿಗೆ ಮತ್ತು ಸಾಮಾಜಿಕ ನ್ಯಾಯ ಎರಡನ್ನು ನಿಭಾಯಿಸುತ್ತಾ ದೇಶದಲ್ಲೇ ಅತ್ಯುತ್ತಮ ಅಭಿವೃದ್ಧಿ ಸಾಧಿಸುತ್ತಿರುವ ರಾಜ್ಯಗಳ ಪೈಕಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ತಿಳಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌
76ನೇ ಗಣರಾಜ್ಯೋತ್ಸವ ದಿನಾಚರಣೆ: ಜನತೆಗೆ ಸಿಎಂ ಶುಭಾಶಯ; ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಪೊಲೀಸ್ ಭದ್ರತೆ

ಗೃಹಲಕ್ಷ್ಮಿ ಯೋಜನೆಯಡಿ ಆಗಸ್ಟ್ 2023ರಿಂದ ಪ್ರತಿ ಕುಟುಂಬದ ಯಜಮಾನಿಯರಿಗೆ ಮಾಸಿಕ 2000 ದರದಲ್ಲಿ ಒಟ್ಟು 35,180.20 ಕೋಟಿ ರೂ ನೆರವು ನೀಡಲಾಗಿದೆ. ಗೃಹಜ್ಯೋತಿಯಲ್ಲಿ 1.62 ಕೋಟಿ ಜನರಿಗೆ ಪ್ರಯೋಜನ ಸಿಕ್ಕಿದೆ. ಶಕ್ತಿ ಯೋಜನೆಯ ಅಡಿ 373.27 ಕೋಟಿ ಟ್ರಿಪ್ ಲಾಭ ಪಡೆಯಲಾಗಿದ್ದು, ಇದಕ್ಕೆ 9051 ಕೋಟಿ ರೂ ಹಣ ವೆಚ್ಚ ಮಾಡಲಾಗಿದೆ. ಯುವನಿಧಿ ಅಡಿ 1,24,176 ಜನ ಅರ್ಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ. ಅನ್ನಭಾಗ್ಯದ ಅಡಿ 4,48,12,382 ಫಲಾನುಭವಿಗಳಿಗೆ ಡಿಬಿಟಿ ಮೂಲಕ 9775.51 ಕೋಟಿ ರೂ ವರ್ಗಾವಣೆ ಮಾಡಲಾಗಿದೆ. ಈ ವರ್ಷ ಶೇ.13 ರಷ್ಟು ಹಣಕಾಸು ಬೆಳವಣಿಗೆ ಸಾಧಿಸಿದೆ.

ಹಣಕಾಸು ವ್ಯವಸ್ಥೆಯನ್ನು ಸರ್ಕಾರ ಉತ್ತಮವಾಗಿ ನಿರ್ವಹಿಸಿದೆ. ರಾಜ್ಯದ ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡಿದೆ. ಡಿಸೆಂಬರ್ 2024ರ ಅಂತ್ಯದ ವೇಳೆಗೆ ರಾಜ್ಯದ ಆದಾಯ ಸಂಗ್ರಹವೂ ರೂ 1.81.908 ಕೋಟಿಗಳಷ್ಟಿದ್ದು, ವರ್ಷದಿಂದ ವರ್ಷಕ್ಕೆ ಶೇ 14ರಷ್ಟು ಬೆಳವಣಿಗೆಯನ್ನು ಸಾಧಿಸಿಕೊಂಡು ಬಂದಿದೆ. ರಾಜ್ಯಗಳು ಸಂಗ್ರಹಿಸಿದ ಒಟ್ಟು ಜಿಎಸ್​ಟಿ ಆದಾಯದ ವಿಷಯದಲ್ಲಿ ಕರ್ನಾಟಕವೂ ದೇಶದಲ್ಲಿ ಎರಡನೇ ಸ್ಥಾನದಲ್ಲಿ ಇದೆ ಎಂದು ಹೇಳಲು ನನಗೆ ಹರ್ಷವೆನಿಸುತ್ತದೆ.

ಸೈಬರ್ ಅಪರಾಧದ ಹಾವಳಿಯು ಒಂದು ಆಘಾತಕಾರಿ ವಿಷಯವಾಗಿದ್ದು, ರಾಜ್ಯದಲ್ಲಿ ಈಗ ವರದಿಯಾಗುತ್ತಿರುವ ಎಲ್ಲಾ ಅಪರಾಧ ಪ್ರಕರಣಗಳ ಒಟ್ಟು ಶೇಕಡಾವಾರು ಸೈಬರ್ ಅಪರಾಧಗಳು 10 ರಷ್ಟಿವೆ. ಅಪರಾಧಿಗಳನ್ಮು ಪತ್ತೆ ಹಚ್ಚಲು ಮತ್ತು ಶಿಕ್ಷಿಸಲು ತಂತ್ರಜ್ಞಾನದ ಪರಿಣಾಮಕಾರಿ ಬಳಕೆ ಮಾಡುವುದು. ಜನರಲ್ಲಿ ಅರಿವು ಮೂಡಿಸುವುದು ಪ್ರಮುಖ ಹೆಜ್ಜೆಯಾಗಿದೆ. ಈ ನಿಟ್ಟಿನಲ್ಲಿ ಸರ್ಕಾರವೂ ಎಲ್ಲಾ ಹಂತಗಳಲ್ಲಿ ತರಬೇತಿ ಮತ್ತು ಅಗತ್ಯ ತಂತ್ರಜ್ಞಾನ ಒದಗಿಸುತ್ತಿದೆ.

ರಾಜ್ಯದಿಂದ ರಫ್ತು ಪ್ರಮಾಣ ಹೆಚ್ಚಾಗಿದೆ ಶೇ 11.17 ರಷ್ಟು ಬೆಳವಣಿಗೆ ಕಂಡಿದೆ. ಕುಡಿಯುವ ನೀರಿನ ಮೂಲಗಳ ಗುಣಮಟ್ಟ ಕಾಪಾಡಿಕೊಳ್ಳಲು 79 ಪ್ರಯೋಗಾಲಯ ನಿರ್ಮಾಣ ಮಾಡಲಾಗಿದೆ. ಕಲ್ಯಾಣ ಕರ್ನಾಟಕದಲ್ಲಿ ಸುಮಾರು 11 ಸಾವಿರ ಕೋಟಿಗೂ ಹೆಚ್ಚಿನ ಯೋಜನೆ ಮತ್ತು ಕಾರ್ಯಕ್ರಮಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com