ವಸಿಷ್ಠ ಸಿಂಹ-ಹರಿಪ್ರಿಯಾ
ವಸಿಷ್ಠ ಸಿಂಹ-ಹರಿಪ್ರಿಯಾ

ವಸಿಷ್ಠ-ಹರಿಪ್ರಿಯಾ ದಂಪತಿಗೆ ಗಂಡು ಮಗು ಜನನ!

ಸ್ಯಾಂಡಲ್‌ವುಡ್‌ ನ ಸೆಲೆಬ್ರೆಟಿ ದಂಪತಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದರು. ಇಂದು ಹರಿಪ್ರಿಯಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
Published on

ಸ್ಯಾಂಡಲ್‌ವುಡ್‌ ನ ಸೆಲೆಬ್ರೆಟಿ ದಂಪತಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದರು. ಇಂದು ಹರಿಪ್ರಿಯಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದ ಜೋಡಿ ಎಲ್ಲಿಯೂ ತಮ್ಮ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಮದುವೆಗೆ ಇನ್ನೇನು ಕೆಲ ದಿನಗಳು ಇದೆ ಎಂದಾಗ ತಮ್ಮ ಪ್ರೇಮ ಪುರಾಣವನ್ನು ಅಭಿಮಾನಿಗಳೆದುರು ತೆರೆದಿಟ್ಟಿದ್ದರು. 2023ರ ಜನವರಿ 26ರಂದು ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಹರಿಪ್ರಿಯಾ ಹಾಗೂ ವಸಿಷ್ಠ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ವಸಿಷ್ಠ ಸಿಂಹ-ಹರಿಪ್ರಿಯಾ
ಪರಸ್ಪರರ ಕೆಲಸದ ಮೇಲಿನ ಅಭಿಮಾನದಿಂದ ನಮ್ಮ ಸ್ನೇಹ ಪ್ರಾರಂಭವಾಯಿತು: ವಸಿಷ್ಠ ಸಿಂಹ- ಹರಿಪ್ರಿಯಾ!

ಹರಿಪ್ರಿಯಾ ಗಂಡು ಮಗುವಿಗೆ ಜನ್ಮ ಕೊಟ್ಟಿದ್ದಾರೆ. ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ. ತಂದೆಯಾದ ಖುಷಿಯನ್ನು ವಸಿಷ್ಠ ಸಿಂಹ ಹಂಚಿಕೊಂಡಿದ್ದಾರೆ.

X

Advertisement

X
Kannada Prabha
www.kannadaprabha.com