Dr.g. Parameshwar
ಡಾ. ಜಿ. ಪರಮೇಶ್ವರ್

ತುಮಕೂರು ಸಮೀಪ 2ನೇ ಏರ್‌ಪೋರ್ಟ್‌ ನಿರ್ಮಾಣ: ಗೃಹ ಸಚಿವ ಡಾ. ಜಿ ಪರಮೇಶ್ವರ್

ತುಮಕೂರು ಬಳಿಯೇ ರಾಜ್ಯದ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಗೃಹ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಭಾನುವಾರ ತಿಳಿಸಿದ್ದಾರೆ.
Published on

ತುಮಕೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಜನ ದಟ್ಟಣೆ ನಿವಾರಿಸುವ ನಿಟ್ಟಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು,ಇದಕ್ಕೆ ಅಗತ್ಯವಾದ ಭೂಮಿ ಗುರುತಿಸುವ ಕಾರ್ಯ ನಡೆಯುತ್ತಿದೆ. ತುಮಕೂರು, ಬಿಡದಿ ಸೇರಿದಂತೆ ನಾಲ್ಕು ಕಡೆಗಳಲ್ಲಿ ವಿಮಾನ ನಿಲ್ದಾಣಕ್ಕೆ ಪ್ರಸ್ತಾವನೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ ತುಮಕೂರು ಬಳಿಯೇ ರಾಜ್ಯದ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಗೃಹ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಭಾನುವಾರ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ತುಮಕೂರು ಹೊರವಲಯ ವಸಂತನರಸಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 48ಕ್ಕೆ ಹೊಂದಿಕೊಂಡಂತೆ ಮೂರು ಸಾವಿರ ಎಕರೆ ಭೂಮಿ ಗುರುತಿಸಲಾಗಿದೆ. ತಾಲೂಕ್ಕಿನ ಸೀಬಿ ಹತ್ತಿರ ಐದು ಸಾವಿರ ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಎರಡು ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಜಿಲ್ಲೆಯಲ್ಲಿಯೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ತುಮಕೂರು ನಗರದ 2 ಕಡೆ ವಧಾಗಾರ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು, ಅಮಾನಿಕೆರೆಗೆ ಗ್ಲಾಸ್ ಬ್ರಿಡ್ಜ್ ಮಾಡಲು ಉದ್ದೇಶಿಸಲಾಗಿದೆ. ಅಲ್ಲದೆ ಅಂಬೇಡ್ಕರ್ ಪುತ್ಥಳಿ ಟೌನ್ ಹಾಲ್‌ನಲ್ಲಿ ಸರ್ಕಲ್ ಮಾಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಸುಮಾರು 2.50 ಲಕ್ಷ ಹುದ್ದೆಗಳು ಖಾಲಿಯಿದ್ದು, ಆದ್ಯತೆ ಮೇರೆಗೆ ಭರ್ತಿ ಮಾಡಲಾಗುವುದು, ಈಗಾಗಲೇ 400 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ 600 ಪಿಐಸ್ ಐ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

Dr.g. Parameshwar
ಬೆಂಗಳೂರಿನಲ್ಲಿ 2ನೇ ಏರ್​ಪೋರ್ಟ್: ಸಿಎಂ ಜೊತೆಗೆ ಚರ್ಚಿಸಿ, ಕೇಂದ್ರಕ್ಕೆ ಪ್ರಸ್ತಾವನೆ- ಎಂಬಿ ಪಾಟೀಲ್

ಇದೇ ವೇಳೆ ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪರಮೇಶ್ವರ, ಈ ಬಗ್ಗೆ ನಿನ್ನೆ ಸರ್ಕಾರ ಸಭೆ ನಡೆಸಿದೆ. ಇರುವ ಕಾನೂನು ಭದ್ರ ಮಾಡುವುದು ಹಾಗೂ ಹೊಸ ಕಾನೂನು ಸೇರಿಸುವ ಬಗ್ಗೆ ಚಿಂತನೆ ನಡೆದಿದೆ. ಒಂದು ವಾರದಲ್ಲಿ ಹೊಸ ಕಾನೂನು ವರದಿಯನ್ನು ರಾಜ್ಯಪಾಲರಿಗೆ ನೀಡಲಾಗುವುದು. ಪೊಲೀಸರಿಗೆ ಸುಮೋಟೋ ಕೇಸ್ ಹಾಕುವ ಅಧಿಕಾರ ಕೊಡುವ ಬಗ್ಗೆ ಚಿಂತನೆ ನಡೆದಿದೆ. ಅನಧಿಕೃತ ಮೈಕ್ರೋ ಫೈನಾನ್ಸ್ ಕಂಪನಿಗಳ ಪತ್ತೆ ಹಚ್ಚಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ ಎಂದು ತಿಳಿಸಿದರು.

X

Advertisement

X
Kannada Prabha
www.kannadaprabha.com