
ಬೆಂಗಳೂರು: ಗಣರಾಜ್ಯೋತ್ಸವದ ಪ್ರಯುಕ್ತ ರಾಜಭವನದಲ್ಲಿಇಂದು ಆಯೋಜಿಸಿದ್ದ ಚಹಾಕೂಟದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡರು
ಇದಕ್ಕೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳು ಕಿರುಕುಳ ನೀಡುತ್ತಿರುವ ಬಗ್ಗೆ ವರದಿಯಾಗುತ್ತಿದೆ. ಮೈಕ್ರೋ ಫೈನಾನ್ಸ್ ಗಳಿಂದ ತೊಂದರೆ ಎದುರಿಸುತ್ತಿರುವವರು ದೂರು ನೀಡಿದಲ್ಲಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಮೈಕ್ರೋ ಫೈನಾನ್ಸ್ ಸಂಸ್ಥೆ ಅಥವಾ ಲೇವಾದೇವಿಗಾರರು ನೀಡುವ ತೊಂದರೆಗಳ ವಿರುದ್ಧ ದೂರು ನೀಡಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದೆ ಎಂದು ತಿಳಿಸಿದರು.
ಆರ್‌ಬಿಐ ನ ನಿಯಮಗಳನ್ನು ಮೀರಿ ಸಾಲ ವಸೂಲಾತಿ ಮಾಡಲು ಪ್ರಯತ್ನಿಸಿದರೆ, ಸಾಲ ಪಡೆದವರಿಗೆ ಕಿರುಕುಳ ನೀಡಿದರೆ ಅಂತಹ ಸಂಸ್ಥೆಗಳ ಮೇಲೆ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಮೈಕ್ರೊ ಫೈನಾನ್ಸ್‌ಗಳ ಕಿರುಕುಳ ಕೊನೆಗೊಳಿಸಲು ಹಾಗೂ ಸಾಲಗಾರರ ಹಿತರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ನಿಯಮ ಮೀರಿದ ವ್ಯವಹಾರ ಮತ್ತು ಬಲವಂತದ ಸಾಲ ವಸೂಲಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ನಿರ್ಣಯ ಮಾಡಿದೆ.
Advertisement