ಮುಡಾ ಹಗರಣ: ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್‌ಗೆ ED ನೊಟೀಸ್

ಇಡಿ ನೋಟಿಸ್​ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್​ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.
File image
ಸಂಗ್ರಹ ಚಿತ್ರ
Updated on

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ನೋಟಿಸ್​​ ಜಾರಿ ಮಾಡಿದೆ.

ಇಡಿ ನೋಟಿಸ್​ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್​ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ್ ಪೀಠಕ್ಕೆ ಮನವಿ ಮಾಡಿದರು. ಸೋಮವಾರ ಕಲಾಪದ ಕೊನೆಗೆ ವಿಚಾರಣೆ ನಡೆಸುವುದಾಗಿ ನ್ಯಾ.ಎಂ.ನಾಗಪ್ರಸನ್ನ ಒಪ್ಪಿಗೆ ಸೂಚಿಸಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಮಧ್ಯಂತರ ತನಿಖಾ ವರದಿಯನ್ನು ಧಾರವಾಡ ಹೈಕೋರ್ಟ್ ಪೀಠಕ್ಕೆ ಇಂದು ಸಲ್ಲಿಸಲಿದ್ದಾರೆ.

ಜಾರಿ ನಿರ್ದೇಶನಾಲಯ ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಸಿದ್ದರಾಮಯ್ಯ ಅವರ ಆಪ್ತ, ಸಚಿವ ಬೈರತಿ ಸುರೇಶ್ ಅವರಿಗೆ ನೋಟಿಸ್ ನೀಡಿದೆ. ನೋಟಿಸ್ ಬಂದ ಬೆನ್ನಲ್ಲೇ ಅದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿ ಅವರಿಗೆ ಕ್ಲೀನ್‌ಚಿಟ್‌ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಹೇಳಲಾಗಿದೆಯಂತೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com