
ಹುಬ್ಬಳ್ಳಿ: ರಾಜ್ಯದಲ್ಲಿ ಇತ್ತೀಚೆಗೆ ಪತ್ನಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇನ್ನು ಪತ್ನಿ ಕಿರುಕುಳ ತಾಳಲಾರದೆ ಡೆತ್ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಚಾಮುಂಡೇಶ್ವರಿನಗರದಲ್ಲಿ ನಡೆದಿದೆ.
ಪತ್ನಿ ಕಿರುಕುಳದಿಂದ ಬೇಸತ್ತು ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ 40 ವರ್ಷದ ಪೀಟರ್ ಸ್ಯಾಮುಯೆಲ್ ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ಕೆಲ ದಿನಗಳಿಂದ ಪತಿ ಪೀಟರ್, ಪತ್ನಿ ಪಿಂಕಿ ನಡುವೆ ಜಗಳವಾಗುತ್ತಿತ್ತು. ಹೀಗಾಗಿ ದಂಪತಿಗಳು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು ಪತಿಯಿಂದ ಪತ್ನಿ ಪಿಂಕಿ 20 ಲಕ್ಷ ರೂಪಾಯಿ ಜೀವನಾಂಶಕ್ಕೆ ಒತ್ತಾಯಿಸುತ್ತಿದ್ದಳು ಎಂಬುದು ವರದಿಯಾಗಿದೆ.
ವಿಪರ್ಯಾಸವೆಂದರೆ, ಪೀಟರ್ ಸಾಯುವ ಮುನ್ನ ಡೆಟ್ ನೋಟ್ ಬರೆದಿಟ್ಟಿದ್ದು ಡ್ಯಾಡಿ ಆಯಮ್ ಸಾರಿ. ಪಿಂಕಿ(ಹೆಂಡತಿ) ಇಸ್ ಕಿಲ್ಲಿಂಗ್ ಮೀ, ಸೀ ವಾಂಟ್ ಮೈ ಡೆಥ್ ಎಂದು ಡೆತ್ನಲ್ಲಿ ಉಲ್ಲೇಖಿಸಿದ್ದಾರೆ. ಇನ್ನು ಪೀಟರ್ ಸಂಬಂಧಿಕರು, ಶವ ಸಂಸ್ಕಾರ ಪೆಟ್ಟಿಗೆ ಮೇಲೆ ಹೆಂಡತಿ ಕಾಟ ತಾಳಲಾರದೆ ಸತ್ತನು ಎಂದು ಬರೆಸಿದ್ದಾರೆ.
Advertisement