
ಬೆಂಗಳೂರು: 76ನೇ ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ರಾಜಭವನಕ್ಕೆ ಸಾರ್ವಜನಿಕರ ಪ್ರವೇಶವನ್ನು ಕಲ್ಪಿಸಲಾಗಿದೆ.
ಪ್ರವೇಶದ ಸಮಯ ಸಂಜೆ 6 ರಿಂದ 7:30ವರೆಗೆ ಇರಲಿದ್ದು, ಸಾರ್ವಜನಿಕರು ಮುಖ್ಯದ್ವಾರದ ಮೂಲಕ ಉಚಿತ ಪ್ರವೇಶ ಪಡೆಯಬಹುದಾಗಿದೆ. ರಾಜಭವನ ಪ್ರವೇಶ ಪಡೆಯಲಿಚ್ಚಿಸುವವರು ಆಧಾರ್ ಕಾರ್ಡ್ ಅಥವಾ ಭಾವಚಿತ್ರವಿರುವ ಅಧಿಕೃತ ಗುರುತಿನ ಚೀಟಿಯನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ.
ಯಾವುದೇ ರೀತಿಯ ಕ್ಯಾಮೆರಾ, ಕೈ ಚೀಲ, ಚೂಪಾದ ವಸ್ತುಗಳು, ತಿಂಡಿ-ತಿನಿಸು, ಪ್ಲಾಸ್ಟಿಕ್ ವಸ್ತುಗಳು ಇನ್ನಿತರ ಯಾವುದೇ ಲಗೇಜ್ ಬ್ಯಾಗ್ ತರುವಂತಿಲ್ಲ. ರಾಜಭವನದ ಒಳಗಡೆ ವಾಹನ ನಿಲುಗಡೆಗೆ ಅವಕಾಶವಿರುವುದಿಲ್ಲ, ಸಾರ್ವಜನಿಕರು ಭದ್ರತಾ ಸಿಬ್ಬಂದಿ ನೀಡುವ ಸೂಚನೆಗಳನ್ನು ಪಾಲಿಸಿ, ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ
Advertisement