
ಬೆಂಗಳೂರು: ವಿಶ್ವ ವಿಖ್ಯಾತ, ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ (Bengaluru Karaga) ಮಹೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದ್ದು, ಏ.4ರಿಂದ 14ರವರೆಗೆ ಬೆಂಗಳೂರು ಕರಗ ಉತ್ಸವ ನಡೆಯಲಿದೆ ಎಂದು ತಿಳಿದುಬಂದಿದೆ.
ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಒಟ್ಟು 11 ದಿನಗಳ ಕಾಲ ಬೆಂಗಳೂರು ಕರಗ ಮಹೋತ್ಸವ ನಡೆಯಲಿದ್ದು, ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಜ್ಞಾನೇಂದ್ರ ಅವರು 15ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ.
ನಿನ್ನೆ ಅಂದರೆ ಫೆ.27ರಂದು ನಡೆದ ಸಭೆಯಲ್ಲಿ ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಹಾಗೂ ಮುಜರಾಯಿ ಇಲಾಖೆ ಎ.ಜ್ಞಾನೇಂದ್ರ ಸ್ವಾಮಿ ಅವರನ್ನು ಕರಗ ಹೊರಲು ಆಯ್ಕೆ ಮಾಡಿದೆ.
ಏಪ್ರಿಲ್ 4 ರಿಂದ ಉತ್ಸವ ಆರಂಭವಾಗಿ ಏಪ್ರಿಲ್ 14 ರವರೆಗೆ ನಡೆಯಲಿದ್ದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಧರ್ಮರಾಯಸ್ವಾಮಿ ಕರಗ ವಿಜೃಂಭಣೆಯಿಂದ ನಡೆಯಲಿದೆ. ಒಟ್ಟಾರೆ ಏ.4 ರಂದು ಧ್ವಜಾರೋಹಣ, ಪೂಜಾ ವಿಧಿವಿಧಾನದ ಮೂಲಕ ಅರಂಭವಾಗುವ ಕರಗ ಏ.14ರವರೆಗೆ ಜರುಗಲಿದೆ.
Advertisement