
ಬೆಂಗಳೂರು: ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಶ್ ಗೋಪಾಲಕೃಷ್ಣನ್, ಭಾರತೀಯ ವಿಜ್ಞಾನ ಸಂಸ್ಥೆ (IISc) ಮಾಜಿ ನಿರ್ದೇಶಕ ಬಲರಾಮ್ ಮತ್ತಿತರ 16 ಜನರ ವಿರುದ್ಧ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆಯಡಿ ಸೋಮವಾರ ಪ್ರಕರಣ ದಾಖಲಾಗಿದೆ.
71ನೇ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನಿರ್ದೇಶನದ ಆಧಾರದ ಮೇಲೆ ನಗರದ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಈ ಸಂಬಂಧ ಭಾರತೀಯ ವಿಜ್ಞಾನ ಸಂಸ್ಥೆಯ (IISc) ಸುಸ್ಥಿರ ತಂತ್ರಜ್ಞಾನ ಕೇಂದ್ರದ ಅಧ್ಯಾಪಕರಾಗಿದ್ದ ಬೋವಿ ಸಮುದಾಯಕ್ಕೆ ಸೇರಿದ ದುರ್ಗಪ್ಪ ದೂರು ದಾಖಲಿಸಿದ್ದರು.
2014ರಲ್ಲಿ ತನ್ನನ್ನು ಹನಿ ಟ್ರ್ಯಾಪ್ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಿ ಸೇವೆಯಿಂದ ವಜಾಗೊಳಿಸಲಾಗಿದೆ. ಅಲ್ಲದೇ ಜಾತಿ ನಿಂದಿಸಿ, ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿದ್ದರು.
ಗೋವಿಂದನ್ ರಂಗರಾಜನ್, ಶ್ರೀಧರ್ ವಾರಿಯರ್, ಸಂದ್ಯಾ ವಿಶ್ವೇಶ್ವರಯ್ಯ, ಹರಿ ಕೆವಿಎಸ್, ದಾಸಪ್ಪ, ಬಲರಾಮ್ ಪಿ, ಹೇಮಲತಾ ಮಹಿಷಿ, ಚಟ್ಟೋಪಾದ್ಯಾಯ ಕೆ, ಪ್ರದೀಪ್ ಡಿ ಸಾವ್ಕಾರ್, ಮತ್ತು ಮನೋಹರನ್ ಈ ಪ್ರಕರಣದ ಇತರ ಆರೋಪಿಗಳಾಗಿದ್ದಾರೆ.
ಕೇಸ್ ದಾಖಲು ಬಗ್ಗೆ IISc ಅಧ್ಯಾಪಕರು ಅಥವಾ IISc ಬೋರ್ಡ್ ಆಫ್ ಟ್ರಸ್ಟಿಗಳ ಸದಸ್ಯರಾಗಿ ಸೇವೆ ಸಲ್ಲಿಸಿರುವ ಕ್ರಿಸ್ ಗೋಪಾಲಕೃಷ್ಣನ್ ಅವರಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.
Advertisement