ಬೆಂಗಳೂರು: ವ್ಯಾಪಾರ ಪರವಾನಗಿ ನವೀಕರಣಕ್ಕೆ ಫೆಬ್ರವರಿ 28 ಕೊನೆಯ ದಿನ!

2025-26ನೇ ಹಣಕಾಸು ವರ್ಷದ ವ್ಯಾಪಾರ ಪರವಾನಗಿಗಳ ನವೀಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೋಮವಾರ ಸುತ್ತೋಲೆ ಹೊರಡಿಸಿದ್ದಾರೆ.
BBMP OFFICE
ಬಿಬಿಎಂಪಿ ಕಚೇರಿ
Updated on

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ವ್ಯಾಪಾರ ಪರವಾನಗಿ (ಟ್ರೇಡ್ ಲೈಸೆನ್ಸ್) ನವೀಕರಣಕ್ಕೆ ಫೆಬ್ರವರಿ 28 ಕೊನೆಯ ದಿನವಾಗಿದೆ.

2025-26ನೇ ಹಣಕಾಸು ವರ್ಷದ ವ್ಯಾಪಾರ ಪರವಾನಗಿಗಳ ನವೀಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೋಮವಾರ ಸುತ್ತೋಲೆ ಹೊರಡಿಸಿದ್ದಾರೆ.

ಸುತ್ತೋಲೆಯ ಪ್ರಕಾರ, ವ್ಯಾಪಾರ ಪರವಾನಗಿ ನವೀಕರಣ ಪಾವತಿಯನ್ನು ಆನ್‌ಲೈನ್ ಅಥವಾ ಕೆನರಾ ಬ್ಯಾಂಕ್‌ನಲ್ಲಿ ಬ್ಯಾಂಕ್ ಚಲನ್ ಮೂಲಕ ಪಾವತಿಸಬೇಕು. ನವೀಕರಣ ಮೊತ್ತವನ್ನು ಪಾವತಿಸಲು ಫೆಬ್ರವರಿ 28 ಕೊನೆಯ ದಿನಾಂಕವಾಗಿದೆ. ಮಾರ್ಚ್ 1 ಮತ್ತು ಮಾರ್ಚ್ 31 ರ ನಡುವೆ ಮಾಡಿದ ಪಾವತಿಗಳಿಗೆ ಶೇ.25ರಷ್ಟು ದಂಡ ಅನ್ವಯಿಸುತ್ತದೆ ಮತ್ತು ಏಪ್ರಿಲ್‌ನಿಂದ ಶೇ,100 ರಷ್ಟು ದಂಡವನ್ನು ವಿಧಿಸಲಾಗುತ್ತದೆ. ನವೀಕರಣ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿ ಪೂರ್ಣಗೊಳಿಸಬೇಕು ಎಂದು ತಿಳಿಸಲಾಗಿದೆ.

ವಸತಿ ಪ್ರದೇಶದಲ್ಲಿ 40 ಅಡಿಗಿಂತ ಕಡಿಮೆ ಅಗಲದ ರಸ್ತೆಗಳಲ್ಲಿ 2015ರ ನಂತರ ಪ್ರಾರಂಭವಾಗಿರುವ ಉದ್ದಿಮೆ ಪರವಾನಗಿಯನ್ನು ತಡೆಹಿಡಿಯಬೇಕು. 40 ಅಡಿಗಳಿಗಿಂತ ಹೆಚ್ಚು ಅಗಲದ ರಸ್ತೆಗಳಲ್ಲಿ 2015ರ ನಂತರ ಪ್ರಾರಂಭವಾಗಿರುವ ಉದ್ದಿಮೆಗಳಿಗೆ ಮಾತ್ರ ಪರವಾನಗಿ ನವೀಕರಣ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.

ನಕ್ಷೆ ಉಲ್ಲಂಘನೆಯಾಗಿರುವ ಕಟ್ಟಡಗಳಲ್ಲಿ ಪೂರ್ತಿ ಅಥವಾ ಭಾಗಶಃವಾಗಿ ಉದ್ದಿಮೆಗಳಿದ್ದರೆ, ವಾಹನ ನಿಲುಗಡೆ ಪ್ರದೇಶದಲ್ಲಿ, ಚಾವಣಿ ಪ್ರದೇಶವನ್ನೂ ಬಳಸುತ್ತಿದ್ದರೆ, ಪರವಾನಗಿ ನವೀಕರಣ ಮಾಡುವಂತಿಲ್ಲ. ಉದ್ದಿಮೆಗಳು, ಕಲ್ಯಾಣ ಮಂಟಪಗಳು ಹೋಟೆಲ್‌, ರೆಸ್ಟೋರೆಂಟ್‌ ತ್ಯಾಜ್ಯ ವಿಲೇವಾರಿ, ಪ್ಲಾಸ್ಟಿಕ್‌ ನಿಷೇಧ ಪಾಲನೆ ಸೇರಿದಂತೆ ಘನತ್ಯಾಜ್ಯ ವಿಲೇವಾರಿ ನಿಯಮಗಳನ್ನು ಪಾಲಿಸುತ್ತಿರುವ ದಾಖಲೆಗಳನ್ನು ಪರಿಶೀಲಿಸಬೇಕು. ವಲಯ ಆರೋಗ್ಯಾಧಿಕಾರಿ, ಉಪ ಆರೋಗ್ಯಾಧಿಕಾರಿ, ಆರೋಗ್ಯ ವೈದ್ಯಾಧಿಕಾರಿಗಳು ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ಎಲ್ಲ ಅಂಶಗಳನ್ನು ಪರಿಗಣಿಸಿ, 2025-26ನೇ ಸಾಲಿನ ಪರವಾನಗಿ ನವೀಕರಣ ನೀಡಬೇಕು ಎಂದು ಸೂಚಿಸಿದ್ದಾರೆ.

BBMP OFFICE
ಬೆಂಗಳೂರು: 3,850 ಕೋಟಿ ರೂ ಬಿಲ್‌ ಬಾಕಿ; ಬಿಬಿಎಂಪಿ ಗುತ್ತಿಗೆದಾರರಿಂದ ಮುಷ್ಕರದ ಎಚ್ಚರಿಕೆ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com