
ಮಂಡ್ಯ: ಮಂಡ್ಯದಲ್ಲಿ ಇಬ್ಬರು ಮಕ್ಕಳ ಜೊತೆಗೆ ತಾಯಿಯೊಬ್ಬಳು ನಾಲಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬನಘಟ್ಟ ಬಳಿ ನಡೆದಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬನಘಟ್ಟ ಬಳಿ ಇಬ್ಬರು ಮಕ್ಕಳೊಂದಿಗೆ ತಾಯಿ ಒಬ್ಬಳು ವಿಸಿನಾಲಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಘಟನೆಯಲ್ಲಿ ಇಬ್ಬರು ಮಕ್ಕಳು ನೀರು ಪಾಲಾಗಿದ್ದು, ಇನ್ನು ತಾಯಿಯನ್ನು ಕೂಡಲೇ ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಧನಂಜಯ್ ಅವರ ಪತ್ನಿ ವಿದ್ಯಾ ಪಾಂಡವಪುರ ಪಟ್ಟಣದ ಹಾರೋಹಳ್ಳಿ ಗ್ರಾಮದವರಾಗಿದ್ದು, ಅವರ ಮಕ್ಕಳಾದ ಲಿತಿಶಾ (8) ಮತ್ತು ಕಿಶನ್ (2) ಅವರೊಂದಿಗೆ ವಿಶ್ವೇಶ್ವರಯ್ಯ ಕಾಲುವೆಗೆ ಹಾರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾತ್ರಿ 8.30 ರವರೆಗೆ ಹುಡುಕಾಟ ನಡೆಸಲಾಗಿದ್ದರೂ, ಮಕ್ಕಳ ಶವಗಳು ಪತ್ತೆಯಾಗಿಲ್ಲ. ಆದರೆ, ಪ್ರಾಣಾಪಾಯದಿಂದ ಪಾರಾದ ವಿದ್ಯಾ, ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಸಮತೋಲನ ತಪ್ಪಿ ಕಾಲುವೆಗೆ ಬಿದ್ದಿದ್ದೇವೆ ಎಂದು ಹೇಳಿದ್ದಾರೆ. ಆದರೆ, ಹಾರೋಹಳ್ಳಿಯಿಂದ ಬನಘಟ್ಟಕ್ಕೆ ಸೆಲ್ಫಿ ತೆಗೆದುಕೊಳ್ಳಲು ಆಕೆ ಏಕೆ ಹೋಗಿದ್ದಾಳೆ ಎಂಬ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಏತನ್ಮಧ್ಯೆ, ವಿದ್ಯಾ ಬಳಸುತ್ತಿದ್ದ ಮೊಪೆಡ್ ಮತ್ತು ಮೊಬೈಲ್ ಫೋನ್ ಎರಡನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾಲುವೆಯಲ್ಲಿ ನೀರಿನ ಮಟ್ಟ ಹೆಚ್ಚಿರುವುದರಿಂದ, ನೀರಿನ ಹರಿವನ್ನು ಕಡಿಮೆ ಮಾಡುವಂತೆ ಪೊಲೀಸರು ಸಿಎನ್‌ಎನ್ಎಲ್ ಅಧಿಕಾರಿಗಳನ್ನು ಕೋರಿದ್ದಾರೆ. ಮಕ್ಕಳ ಮೃತ ದೇಹಗಳಿಗಾಗಿ ಹುಡುಕಾಟ ನಡೆಯುತ್ತಿದೆ.
ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆ ತನ್ನ ಇಬ್ಬರು ಮಕ್ಕಳ ಜೊತೆಗೆ ವಿಸಿ ನಾಲಿಗೆ ಹಾರಿದ್ದಾಳೆ. ಇದನ್ನು ನೋಡಿದ ಸ್ಥಳೀಯರು ತಕ್ಷಣ ಮಹಿಳೆಯನ್ನು ರಕ್ಷಣೆ ಮಾಡಿದ್ದು ದುರಾದೃಷ್ಟ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
Advertisement