ಇನ್ನೆಷ್ಟು ದಿನ ಕಡಿಮೆ ಬೆಲೆಗೆ ನೀರು ನೀಡಲು ಸಾಧ್ಯ?: ಕಾವೇರಿ ನೀರಿನ ದರ ಏರಿಕೆ ಬಗ್ಗೆ DK Shivakumar ಸುಳಿವು

ನಗರದ ಕಾವೇರಿ ಭವನದಲ್ಲಿ ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್ಎಸ್‌ಬಿ, ಬಿಎಂಆರ್‌ಡಿಎ ಅಧಿಕಾರಿಗಳ ಜತೆ ಮಂಗಳವಾರ ಸಭೆ ನಡೆಸಿ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್
DK Shivakumar
ಡಿಕೆ ಶಿವಕುಮಾರ್online desk
Updated on

ಬೆಂಗಳೂರು: ಬೆಂಗಳೂರಿಗೆ ಪೂರೈಕೆಯಾಗುತ್ತಿರುವ ಕಾವೇರಿ ನೀರಿನ ದರ ಏರಿಕೆಯ ಬಗ್ಗೆ ಜಲಸಂಪನ್ಮೂಲ ಸಚಿವ, ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ.

ನಗರದ ಕಾವೇರಿ ಭವನದಲ್ಲಿ ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್ಎಸ್‌ಬಿ, ಬಿಎಂಆರ್‌ಡಿಎ ಅಧಿಕಾರಿಗಳ ಜತೆ ಮಂಗಳವಾರ ಸಭೆ ನಡೆಸಿ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್

ಏನೂ ಇಲ್ಲದೇ ಇನ್ನೆಷ್ಟು ದಿನ ಕಡಿಮೆ ಬೆಲೆಗೆ ನೀರು ನೀಡಲು ಆಗುತ್ತದೆ. ಮಂಡಳಿಯಲ್ಲಿ ನೌಕರರು ಸಂಬಳ ನೀಡಿಲ್ಲ ಎಂದು ಜಗಳ ಮಾಡುತ್ತಿದ್ದಾರೆ' ಜಲ ಮಂಡಳಿಗೆ 1 ಸಾವಿರ ಕೋಟಿ ರೂ. ನಷ್ಟವಾಗುತ್ತಿದೆ. ಚರ್ಚೆಯ ನಂತರ ಬೆಲೆ ಏರಿಕೆ ಬಗ್ಗೆ ತಿಳಿಸಲಾಗುವುದು. ಇದರ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಬಡವರು ಹೆಚ್ಚು ಹಣ ನೀಡಲು ಆಗದಿದ್ದರೆ ಒಂದು ಲೀಟರ್‌ಗೆ ಒಂದು ಪೈಸೆಯಾದರೂ ನೀಡಲಿ ಎಂಬುದು ನಮ್ಮ ಅಭಿಲಾಷೆ. ಇದರಿಂದ ನೀರಿನ ಬಳಕೆಯ ಲೆಕ್ಕ ದೊರೆಯಲಿ ಎನ್ನುವುದು ಇದರ ಉದ್ದೇಶ ವರದಿ ನೀಡಿದ ತಕ್ಷಣ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.

2014 ರಿಂದ ಈ ವರೆಗೂ ನಗರದಲ್ಲಿ ಕಾವೇರಿ ನೀರಿನ ದರ ಹೆಚ್ಚಳ ಮಾಡಿಲ್ಲ. ಈ ಕಾರಣಕ್ಕೆ ಬೆಂಗಳೂರು ಜಲಮಂಡಳಿಗೆ ವರ್ಷಕ್ಕೆ 1 ಸಾವಿರ ಕೋಟಿ ರೂ. ನಷ್ಟ ಆಗುತ್ತಿದೆ. ವಿದ್ಯುತ್ ಬಿಲ್ ಈ ಹಿಂದೆ 35 ಕೋಟಿ ರೂ. ಆಗುತ್ತಿತ್ತು. ಈ ಬಾರಿ 75 ಕೋಟಿ ರೂ. ಆಗಿದೆ. ಇತರೇ ಸೇವೆಗಳು, ಮಾನವ ಸಂಪನ್ಮೂಲ ವೆಚ್ಚ ಸೇರಿದಂತೆ ತಿಂಗಳಿಗೆ 85 ಕೋಟಿ ಹಣ ನಷ್ಟವಾಗುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

DK Shivakumar
ಬೆಂಗಳೂರಿನಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿತ: ಎಚ್ಚೆತ್ತುಕೊಳ್ಳದಿದ್ದರೇ ಈ ಬಾರಿ ಬೇಸಿಗೆಯಲ್ಲಿ ನೀರಿನ 'ತುರ್ತು ಪರಿಸ್ಥಿತಿ'!

ನೀರಿನ ಜಾಲ ವಿಸ್ತರಣೆ ಮಾಡುವ ಸಲುವಾಗಿ ಅನೇಕ ಬ್ಯಾಂಕ್‌ಗಳ ಬಳಿ ಸಾಲ ಕೇಳಲೂ ಆಗುತ್ತಿಲ್ಲ. ಬ್ಯಾಂಕ್ ಅವರು ಮಂಡಳಿ ನಷ್ಟದಲ್ಲಿದೆ ನಾವು ಸಹಾಯ ಮಾಡಲು ಆಗುವುದಿಲ್ಲ ಎನ್ನುತ್ತಿದ್ದಾರೆ. ನಮಗೆ ಹಣ ನೀಡುತ್ತಿರುವ ಜೈಕಾ ಸಂಸ್ಥೆ ಸೇರಿ ಹಲವಾರು ಸಂಸ್ಥೆಗಳು ನೆರವು ಬೇಕು ಎಂದಾದರೆ ಹಣ ವಾಪಸಾತಿಯ ಬಗ್ಗೆ ಭರವಸೆ ನೀಡಿ ಎಂದು ತಿಳಿಸುತ್ತಿದ್ದಾರೆ ಡಿಕೆ ಶಿವಕುಮಾರ್ ವಿವರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com