
ಮೈಸೂರು: ಪ್ರಯಾಗ್ರಾಜ್ ಮಹಾಕುಂಭಮೇಳ ಯಾತ್ರೆ ಮುಗಿಸಿ ವಾಪಸ್ ಬರುತ್ತಿದ್ದಾಗ ಸಂಭವಿಸಿದ ಕಾರು ಅಪಘಾತದಲ್ಲಿ ರಾಜ್ಯದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಮಿರ್ಜಾಪುರ ಬಳಿ ನಡೆದಿದೆ. ಮೈಸೂರು ತಾಲೂಕಿನ ಮಂಟಿಕ್ಯಾತನಹಳ್ಳಿ ನಿವಾಸಿ ರಾಮಕೃಷ್ಣ ಶರ್ಮಾ, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟ ತಾಲೂಕಿನ ಕೆಆರ್ಎಸ್ ನಿವಾಸಿ ಅರುಣ್ ಶಾಸ್ತ್ರಿ ಮೃತ ದುರ್ದೈವಿಗಳು.
ಯುವಕರು ಎರಡು ಕಾರುಗಳಲ್ಲಿ ಪ್ರಯಾಗ್ರಾಜ್ ಯಾತ್ರೆಗೆ ಹೋಗಿದ್ದರು. ಪ್ರಯಾಗ್ರಾಜ್ ಯಾತ್ರೆ ಮುಗಿಸಿ ಕಾಶಿಗೆ ಬರುತ್ತಿದ್ದಾಗ ಮಿರ್ಜಾಪುರದ ಬಳಿ ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದು ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೆ ರಾಮಕೃಷ್ಣ ಶರ್ಮಾ ಮತ್ತು ಅರುಣ್ ಶಾಸ್ತ್ರಿ ಮೃತಪಟ್ಟಿದ್ದಾರೆ.
Advertisement