ಬೆಂಗಳೂರು: ಮೊಬೈಲ್ ಗೀಳಿಗೆ ಪ್ರಾಣ ಕಳೆದುಕೊಂಡ 13 ವರ್ಷದ ಬಾಲಕ; ಉಡದಾರದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ

ಧ್ರುವ ಆತ್ಮಹತ್ಯೆಗೆ ಶರಣಾದ ಬಾಲಕ. ಈತ 9 ವರ್ಷದ ತಂಗಿಯ ಮುಂದೆಯೇ ಉಡದಾರದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಮೊಬೈಲ್ ಗೀಳಿಗೆ 13 ವರ್ಷದ ಬಾಲಕನೋರ್ವ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ.

ಧ್ರುವ ಆತ್ಮಹತ್ಯೆಗೆ ಶರಣಾದ ಬಾಲಕ. ಈತ 9 ವರ್ಷದ ತಂಗಿಯ ಮುಂದೆಯೇ ಉಡದಾರದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ಅಣ್ಣ ಏನು ಮಾಡುತ್ತಿದ್ದಾನೆ ಎಂಬ ಅರಿವು ಇಲ್ಲದೆ ತಂಗಿ ಸುಮ್ಮನೆ ನೋಡುತ್ತಿದ್ದಳು ಎನ್ನಲಾಗಿದೆ.

ಧ್ರುವ ಮನೆಯವರ ಮಾತು ಕೇಳದೆ ಹೆಚ್ಚಾಗಿ ಮೊಬೈಲ್ ಬಳಸುತ್ತಿದ್ದ ಎಂದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮಂಗಳವಾರ ಪೋಷಕರು ಕೆಲಸಕ್ಕೆ ತೆರಳಿದ್ದರು. ಶಾಲೆ ಮುಗಿಸಿ ಬಂದ ಅಣ್ಣ-ತಂಗಿ ಮಾತ್ರ ಮನೆಯಲ್ಲಿದ್ದರು. ಆಗ ಬಾಲಕ ಪ್ಯಾಂಟ್ ತೆಗೆದು ಸೊಂಟದ ಉಡದಾರ ಫ್ಯಾನ್‌ಗೆ ಕಟ್ಟಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಸಂಜೆ 7 ಗಂಟೆಯ ಸುಮಾರಿಗೆ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆಗ ಉಡದಾರ ಕುತ್ತಿಗೆಗೆ ಬಿಗಿದು, ತುಂಡಾಗಿ ಬಾಲಕ ಕೆಳಗೆ ಬಿದ್ದಿದ್ದಾನೆ. ಬಾಲಕ ಕೆಳಗೆ ಬಿದ್ದ ಸಮಯಕ್ಕೆ ಕೆಲಸ ಮುಗಿಸಿ ತಾಯಿ ಬಂದಿದ್ದಾರೆ. ಘಟನೆ ನೋಡಿ ಆತಂಕಗೊಂಡ ತಾಯಿ ಅಕ್ಕಪಕ್ಕದವರ ಸಹಾಯ ಪಡೆದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಬಾಲಕನನ್ನು ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

Representational image
'ನನ್ನ ಹೆಂಡತಿಯ ಕಾಟ ತಾಳಲಾರದೆ ಸತ್ತೆನು'; ಶವಪೆಟ್ಟಿಗೆ ಮೇಲೆ ಪ್ರಿಂಟ್, ವ್ಯಕ್ತಿ ಆತ್ಮಹತ್ಯೆ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com