ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಪ್ರಕರಣ: ಸಿಬಿಐ ತನಿಖೆ ಕೋರಿದ್ದ ಯತ್ನಾಳ್‌ಗೆ ಸುಪ್ರೀಂ ಕೋರ್ಟ್ ತರಾಟೆ
ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ಕಾಂಗ್ರೆಸ್ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರು, ಅರ್ಜಿದಾರ ಯತ್ನಾಳ್ ಅವರನ್ನು ತರಾಟೆಗೆ ತೆಗೆದುಕೊಂಡಿರು. ಪೊಲಿಟಿಕಲ್ ಅಡ್ವಾಂಟೆಜ್ ತೆಗೆದುಕೊಳ್ಳಲು ಇಂತಹ ಅರ್ಜಿ ಯಾಕೆ ಹಾಕುತ್ತೀರಿ. ರಾಜಕೀಯ ಮಾಡುವುದಾದರೆ ಫೀಲ್ಡ್ ನಲ್ಲಿ ಮಾಡಿ ಎಂದು ಯತ್ನಾಳ್‌ಗೆ ಕ್ಲಾಸ್ ತೆಗೆದುಕೊಂಡಿದ್ದು, ಮುಂದಿನ ವಿಚಾರಣೆಯನ್ನು ಮಾರ್ಚ್ 26ಕ್ಕೆ ಮುಂದೂಡಿದೆ.
ಈ ಹಿಂದೆ ಬಿಜೆಪಿ ಸರ್ಕಾರ, ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿತ್ತು. ಆದರೆ, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ರದ್ದು ಮಾಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿ ಆದೇಶ ಹೊರಡಿಸಿತ್ತು. ನಂತರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ