ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ: ಡಿ.ಕೆ ಶಿವಕುಮಾರ್

ಪ್ರತಿಯೊಬ್ಬ ನಾಗರಿಕನಿಗೂ ತನ್ನದೇ ಆದ ವೈಯಕ್ತಿಕ ಜೀವನವಿರುತ್ತದೆ. ಇಡೀ ದೇಶದಲ್ಲಿ ಜಾರಿ ಮಾಡಲು ಸಾಧ್ಯವಿಲ್ಲದ್ದು, ಒಂದು ರಾಜ್ಯದಲ್ಲಿ ಜಾರಿ ಮಾಡಲು ಹೇಗೆ ಸಾಧ್ಯ?" ಎಂದು ಹೇಳಿದರು
DK Shivakumar
ಡಿ.ಕೆ ಶಿವಕುಮಾರ್
Updated on

ತಿರುಚಿರಾಪಲ್ಲಿ (ತಮಿಳುನಾಡು): ನಮ್ಮ ದೇಶ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ. ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಸ್ಕೌಟ್ ಮತ್ತು ಗೈಡ್ಸ್ ನ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಅವರು, ಹರಿಯಾಣ ಬಿಜೆಪಿ ಸರ್ಕಾರ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿರುವ ಬಗ್ಗೆ ಪ್ರತಿಕ್ರಿಯಿಸಿದರು. ಪ್ರತಿಯೊಬ್ಬ ನಾಗರಿಕನಿಗೂ ತನ್ನದೇ ಆದ ವೈಯಕ್ತಿಕ ಜೀವನವಿರುತ್ತದೆ. ಇಡೀ ದೇಶದಲ್ಲಿ ಜಾರಿ ಮಾಡಲು ಸಾಧ್ಯವಿಲ್ಲದ್ದು, ಒಂದು ರಾಜ್ಯದಲ್ಲಿ ಜಾರಿ ಮಾಡಲು ಹೇಗೆ ಸಾಧ್ಯ?" ಎಂದು ಹೇಳಿದರು.

ಸ್ಕೌಟ್ ಮತ್ತು ಗೈಡ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ನನಗೆ ತುಂಬಾ ಸಂತೋಷವಾಯಿತು. ನಾನು ಸಹ ನನ್ನ ಶಾಲಾ ದಿನಗಳಲ್ಲಿ ಇದರ ಭಾಗವಾಗಿದ್ದೆ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಮಾನವೀಯತೆ ಮತ್ತು ಶಿಸ್ತನ್ನು ಇಲ್ಲಿಂದ ವಿದ್ಯಾರ್ಥಿಗಳು ಕಲಿಯಬಹುದು.

ಜೊತೆಗೆ ನಾಯಕತ್ವ ಗುಣವನ್ನು ಇದು ಬೆಳೆಸುತ್ತದೆ. ಯುವ ಜನತೆಯ ವ್ಯಕ್ತಿತ್ವ ಇದರಿಂದ ಗಟ್ಟಿಯಾಗುತ್ತದೆ. ತಮಿಳುನಾಡು ಸರ್ಕಾರ ಅಚ್ಚುಕಟ್ಟಾಗಿ ಈ ಕಾರ್ಯಕ್ರಮವನ್ನು ಆ ಯೋಜನೆ ಮಾಡಿದೆ. ಇಷ್ಟು ದೊಡ್ಡ ಕಾರ್ಯಕ್ರಮವನ್ನು ಆಯೋಜಿಸುವುದು ಸುಲಭದ ಕೆಲಸವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

DK Shivakumar
ಮುಂದಿನ ದಿನಗಳಲ್ಲಿ ಎಲ್ಲಾ ಸಂಸ್ಥೆಗಳಲ್ಲೂ ಕನ್ನಡ ಬಾವುಟ ಹಾರಾಟ ಕಡ್ಡಾಯ ಮಾಡುತ್ತೇವೆ : ಡಿ.ಕೆ ಶಿವಕುಮಾರ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com