ಮೈಕ್ರೋಫೈನಾನ್ಸ್ ಸಂಸ್ಥೆಗಳ ಕುರಿತು ಕರಡು ಸುಗ್ರೀವಾಜ್ಞೆ ತರಲು ಸಭೆ: ಸಚಿವ ಡಾ ಜಿ ಪರಮೇಶ್ವರ್

ಸಾಲಗಾರರಿಗೆ ಸಹಾಯವಾಣಿ ಸಂಖ್ಯೆಯನ್ನು ಒದಗಿಸುತ್ತೇವೆ. ನಮ್ಮ ಕರಡು ಸುಗ್ರೀವಾಜ್ಞೆಯಲ್ಲಿ, ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಿದ್ದು, ಒಂದು ವಿಭಾಗವನ್ನು ರಚಿಸಲು ಶಿಫಾರಸು ಮಾಡಲಿದ್ದೇವೆ ಎಂದರು.
Dr G Parameshwar
ಡಾ ಜಿ ಪರಮೇಶ್ವರ್
Updated on

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾಲ ಪಡೆಯುವವರ ಹಿತಾಸಕ್ತಿಗಳನ್ನು ರಕ್ಷಿಸಲು ಕರಡು ಸುಗ್ರೀವಾಜ್ಞೆ ತರಲು ಇಂದು ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ.

ಕರಡನ್ನು ಅಂತಿಮಗೊಳಿಸಿದ ನಂತರ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು. ಶೀಘ್ರದಲ್ಲೇ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಕಳುಹಿಸಲಾಗುವುದು ಎಂದು ಹೇಳಿದರು. ಇಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್, ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ನಾನು ಸಭೆಯಲ್ಲಿ ಭಾಗವಹಿಸಲಿದ್ದೇವೆ. ಕರಡು ಸುಗ್ರೀವಾಜ್ಞೆಯನ್ನು ಚರ್ಚಿಸಿ ಅಂತಿಮಗೊಳಿಸುತ್ತೇವೆ ಎಂದು ಬೆಂಗಳೂರಿನಲ್ಲಿಂದು ಸುದ್ದಿಗಾರರಿಗೆ ತಿಳಿಸಿದರು.

ಈ ಮಧ್ಯೆ, ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಯನ್ನು ನಿಯಂತ್ರಿಸಲು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಸಾಲಗಾರರಿಗೆ ಸಹಾಯವಾಣಿ ಸಂಖ್ಯೆಯನ್ನು ಒದಗಿಸುತ್ತೇವೆ. ನಮ್ಮ ಕರಡು ಸುಗ್ರೀವಾಜ್ಞೆಯಲ್ಲಿ, ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಿದ್ದು, ಒಂದು ವಿಭಾಗವನ್ನು ರಚಿಸಲು ಶಿಫಾರಸು ಮಾಡಲಿದ್ದೇವೆ ಎಂದರು.

Dr G Parameshwar
ಮೈಕ್ರೋ ಫೈನಾನ್ಸ್ ಗಳಿಂದ ತೊಂದರೆ: ದೂರು ನೀಡಿದಲ್ಲಿ ತಕ್ಷಣ ಕಾನೂನು ಕ್ರಮ- ಸಿಎಂ ಸಿದ್ದರಾಮಯ್ಯ

ಮೈಕ್ರೋಫೈನಾನ್ಸ್ ಕಂಪನಿಗಳ ಹಾವಳಿ ಮುಂದುವರಿದಿದ್ದು, ಸಾಲಗಾರರಿಂದ ಹಣವನ್ನು ವಸೂಲಿ ಮಾಡಲು ಹೊರಗುತ್ತಿಗೆ ನೀಡಿದ್ದಾರೆ. ಹೊರಗುತ್ತಿಗೆ ಸಂಸ್ಥೆಗಳು ರೌಡಿಗಳಂತೆ ವರ್ತಿಸುತ್ತವೆ, ಇದನ್ನು ಮಾಡಬಾರದು. ನಾವು ಮೈಕ್ರೋಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಪರಮೇಶ್ವರ್ ಹೇಳಿದರು.

ಸುಗ್ರೀವಾಜ್ಞೆಯನ್ನು ಇಂದು ಯಾವಾಗ ಅಂತಿಮಗೊಳಿಸಿ ಜಾರಿಗೆ ತರಲಾಗುತ್ತದೆ ಎಂಬ ಪ್ರಶ್ನೆಗೆ, ಕರಡನ್ನು ಇಂದು ಅಂತಿಮಗೊಳಿಸಿದರೆ, ಅದನ್ನು ನಾಳೆಯೇ ಸಂಪುಟದಲ್ಲಿ ಮಂಡಿಸಲಾಗುವುದು ಎಂದು ಹೇಳಿದರು.

ಮೈಕ್ರೋಫೈನಾನ್ಸ್ ಕಂಪನಿಗಳು ಸಾಲಗಾರರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತುರ್ತು ಸಭೆ ಕರೆದಿದ್ದರು. ಸಾಲಗಾರರಿಗೆ ಕಿರುಕುಳ ನೀಡದಂತೆ ಮೈಕ್ರೋಫೈನಾನ್ಸ್ ಕಂಪನಿಗಳಿಗೆ ಎಚ್ಚರಿಕೆ ನೀಡಿದ್ದರು.

ಮುಖ್ಯಮಂತ್ರಿಯವರ ಪ್ರಕಾರ, ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳ ವಿರುದ್ಧ ಏಳು ಪ್ರಕರಣಗಳು ದಾಖಲಾಗಿವೆ.

Dr G Parameshwar
ತುಮಕೂರು ಸಮೀಪ 2ನೇ ಏರ್‌ಪೋರ್ಟ್‌ ನಿರ್ಮಾಣ: ಗೃಹ ಸಚಿವ ಡಾ. ಜಿ ಪರಮೇಶ್ವರ್

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ತುಮಕೂರು ಬಳಿ ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಾಧ್ಯತೆಯ ಕುರಿತು, ಉತ್ತರ ಕರ್ನಾಟಕದ ಪ್ರಯಾಣಿಕರಿಗೆ ಸಹಾಯವಾಗುವ ಕಾರಣ ಹೊಸ ವಿಮಾನ ನಿಲ್ದಾಣವನ್ನು ತಮ್ಮ ತವರು ಜಿಲ್ಲೆಯಲ್ಲಿ ಬಂದರೆ ಉತ್ತಮ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com