ವೇತನ ಬಾಕಿ ಬಿಡುಗಡೆಗೆ ಆಗ್ರಹ: ಫೆಬ್ರವರಿ 1ರಿಂದ KMF ನೌಕರರ ಮುಷ್ಕರದ ಬೆದರಿಕೆ

7ನೇ ವೇತನ ಆಯೋಗದ ಶಿಫಾರಸಿನಂತೆ ಬಾಕಿ ಉಳಿದಿರುವ ವೇತನ ಶೀಘ್ರವೇ ಮಂಜೂರು ಮಾಡಬೇಕೆಂದು ಕೆಎಂಎಫ್ ನೌಕರರ ಸಂಘದ ಅಧ್ಯಕ್ಷ ಗೋವಿಂದಗೌಡ ಆಗ್ರಹಿಸಿದ್ದಾರೆ.
File image
ಸಂಗ್ರಹ ಚಿತ್ರ
Updated on

ಬೆಂಗಳೂರು: ಬಾಕಿ ವೇತನ ಬಿಡುಗಡೆಯೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ನೌಕರರು ಆಗ್ರಹಿಸಿದ್ದಾರೆ. ಬೇಡಿಕೆಗಳನ್ನು ಈಡೇರಿಸದಿದ್ದರೆ ಫೆಬ್ರವರಿಯಿಂದ ಮುಷ್ಕರ ನಡೆಸುವುದಾಗಿ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ನೌಕರರ ಸಂಘವು ಈಗಾಗಲೇ ಆಡಳಿತ ಮಂಡಳಿಗೆ ಮನವಿ ಪತ್ರ ಸಲ್ಲಿಸಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸಲು ಒಂದು ವಾರ ಕಾಲಾವಕಾಶ ನೀಡಿದೆ. ಇದು ಜನವರಿ 31ಕ್ಕೆ ಕೊನೆಗೊಳ್ಳಲಿದೆ. ಅಷ್ಟರೊಳಗೆ ಬೇಡಿಕೆಗಳು ಈಡೇರದಿದ್ದರೆ ಮುಷ್ಕರ ನಡೆಸಲಾಗುವುದು ಎಂದು ನೌಕರರ ಸಂಘ ಎಚ್ಚರಿಕೆ ನೀಡಿದೆ.

7ನೇ ವೇತನ ಆಯೋಗದ ಶಿಫಾರಸಿನಂತೆ ಬಾಕಿ ಉಳಿದಿರುವ ವೇತನ ಶೀಘ್ರವೇ ಮಂಜೂರು ಮಾಡಬೇಕೆಂದು ಕೆಎಂಎಫ್ ನೌಕರರ ಸಂಘದ ಅಧ್ಯಕ್ಷ ಗೋವಿಂದಗೌಡ ಆಗ್ರಹಿಸಿದ್ದಾರೆ. 7ನೇ ವೇತನ ಆಯೋಗದ ಶಿಫಾರಸಿನ ಪ್ರಕಾರನ ಶೇ 25 ರ ವೇತನ ಹೆಚ್ಚಳಕ್ಕೆ ಸರ್ಕಾರ ಒಪ್ಪಿಗೆ ನೀಡಿತ್ತು. ಆದರೆ ಈ ಪೈಕಿ ಶೇ 17 ರಷ್ಟು ಮಾತ್ರ ಹೆಚ್ಚಳ ಮಾಡಿದೆ. ಶೇ 8 ರಷ್ಟು ವೇತನ ಹೆಚ್ಚಳ ಹಾಗೂ ಬಿಡುಗಡೆ ಬಾಕಿ ಇದೆ. ಅವುಗಳನ್ನು ಈಡೇರಿಸಬೇಕು ಎಂದು ಗೋವಿಂದಗೌಡ ಹೇಳಿದ್ದಾರೆ.

KMF ರಾಜ್ಯಾದ್ಯಂತ ಸುಮಾರು 7,000 ಉದ್ಯೋಗಿಗಳನ್ನು ಒಳಗೊಂಡಿದೆ, ಅವರಲ್ಲಿ 1,400 ಉನ್ನತ ದರ್ಜೆಯ ಸಿಬ್ಬಂದಿ ಇದ್ದಾರೆ. ಇದರ ಆಧಾರದಲ್ಲಿ ಲೆಕ್ಕಹಾಕಿದರೆ, ವೇತನ ಹೆಚ್ಚಳ ಜಾರಿಗೆ ಬಂದರೆ ಅದಕ್ಕಾಗಿ ಸರ್ಕಾರ ತಿಂಗಳಿಗೆ 3 ಕೋಟಿ ರೂ. ವ್ಯಯಿಸಬೇಕಾಗುತ್ತದೆ.

ಸದ್ಯದ ಮಟ್ಟಿಗೆ, ವೇತನ ಬಾಕಿಯ ಮೊತ್ತದ ಬಿಡುಗಡೆ ಮಾಡಲು ಸರ್ಕಾರವು ಇನ್ನೂ ಅನುಮತಿ ನೀಡಿಲ್ಲ ಎಂದು ಆಡಳಿತ ಮಂಡಳಿ ಭಾವಿಸಿದೆ ಎಂದು ಕೆಎಂಎಫ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೆಎಂಎಫ್ ದಿನಕ್ಕೆ ಸುಮಾರು 1 ಲಕ್ಷ ಲೀಟರ್ ಹಾಲನ್ನು ಗ್ರಾಹಕರಿಗೆ ಪೂರೈಸುತ್ತಿದ್ದು, 15 ಒಕ್ಕೂಟಗಳ ಮೂಲಕ ಹಾಲು ಸಂಗ್ರಹಿಸುತ್ತಿದೆ.

File image
Maha Kumbh Mela: 1 ಕೋಟಿ ಕಪ್ ಚಹಾ ವಿತರಣೆ; ಗಿನ್ನಿಸ್ ದಾಖಲೆ ಮಾಡಲು KMF ಮುಂದು!

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com