ರಾಯಚೂರು: ಹಾಡುಹಗಲೇ ಕಾಲೇಜು ಹುಡುಗಿಯ ಕತ್ತು ಸೀಳಿ ಬರ್ಬರ ಹತ್ಯೆ; ಆರೋಪಿ ಮುಬಿನ್ ಬಂಧನ

ಸಿಂಧನೂರು ಸರ್ಕಾರಿ ಕಾಲೇಜಿನಲ್ಲಿ ಎಂಎಸ್​ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಸಿಂಧನೂರಿನ ಹೊರ ಭಾಗದಲ್ಲಿ ನಡೆದಿದೆ.
ಆರೋಪಿ ಮುಬಿನ್
ಆರೋಪಿ ಮುಬಿನ್
Updated on

ರಾಯಚೂರು: ಸಿಂಧನೂರು ಸರ್ಕಾರಿ ಕಾಲೇಜಿನಲ್ಲಿ ಎಂಎಸ್​ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಸಿಂಧನೂರಿನ ಹೊರ ಭಾಗದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು 24 ವರ್ಷದ ಶಿಫಾ ಅಬ್ದುಲ್ ವಾಹೀದ್ ಎಂದು ಗುರುತಿಸಲಾಗಿದೆ. ಆರೋಪಿ ಮುಬಿನ್ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಕಾಲೇಜಿಗೆ ತೆರಳುತ್ತಿದ್ದ ಶಿಫಾಳನ್ನು ಮಾತನಾಡಬೇಕೆಂದು ಕರೆದಿದ್ದಾನೆ. ಈ ವೇಳೆ ವಿದ್ಯಾರ್ಥಿನಿ ಕಾಲೇಜಿಗೆ ಹೋಗದೆ ಮುಬಿನ್ ಜೊತೆ ಮಾತನಾಡಲು ಹೋಗಿದ್ದಾಳೆ. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಮುಬಿನ್ ಚೂರಿ ತೆಗೆದು ಶಿಫಾಳ ಕತ್ತು ಸೀಳಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದ ಶಿಫಾ ಮೃತಪಟ್ಟಿದ್ದಾಳೆ.

ಮಗಳ ಸಾವಿನ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಶಿಫಾಳ ಪೋಷಕರು ಕಣ್ಣೀರು ಹಾಕಿದರು. ಘಟನಾ ಸ್ಥಳಕ್ಕೆ ಡಿವೈಎಸ್​ಪಿ ಬಿ ಎಸ್ ತಳವಾರ, ಗ್ರಾಮೀಣ ಠಾಣೆಯ ಸಿಪಿಐ ವೀರಾರೆಡ್ಡಿ, ಬಳಗಾನೂರು ಪಿಎಸ್ಐ ಯರಿಯಪ್ಪ ಸೇರಿದಂತೆ ಪೊಲೀಸ್ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಕೊಲೆ ಮಾಡಿದ ಬಳಿಕ ಆರೋಪಿ ಮುಬಿನ್ ಲಿಂಗಸುಗೂರು ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಆರೋಪಿ ಮುಬಿನ್
ಬೆಂಗಳೂರು: ಮರದ ದಿಮ್ಮಿಯಿಂದ ಮಹಿಳೆ ಮೇಲೆ ಹಲ್ಲೆ, ಕೋಮಾದಲ್ಲಿ ಇಬ್ಬರು ಮಕ್ಕಳ ತಾಯಿ!

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com