ಮಹಾಕುಂಭ ಮೇಳಕ್ಕೆ ಹೋದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ: ಸಿದ್ದರಾಮಯ್ಯ

ಪ್ರಯಾಗ್‌ರಾಜ್‌ನಲ್ಲಿರುವ ಭಕ್ತರ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ 80-22340676 ಸಹಾಯವಾಣಿಯನ್ನು ಸ್ಥಾಪಿಸಿದೆ ಎಂದು ಅವರು ಹೇಳಿದರು.
ಮಹಾಕುಂಭ ಮೇಳಕ್ಕೆ ಹೋದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ: ಸಿದ್ದರಾಮಯ್ಯ
Updated on

ಬೆಂಗಳೂರು: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗವಹಿಸುತ್ತಿರುವ ಕರ್ನಾಟಕದ ಭಕ್ತರು ಕಾಲ್ತುಳಿತದ ನಂತರ ಭಯಭೀತರಾಗಬೇಡಿ. ತಮ್ಮ ಡೇರೆಗಳಲ್ಲಿಯೇ ಸುರಕ್ಷಿತವಾಗಿ ಇರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಪ್ರಯಾಗ್‌ರಾಜ್‌ನಲ್ಲಿರುವ ಭಕ್ತರ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ 80-22340676 ಸಹಾಯವಾಣಿಯನ್ನು ಸ್ಥಾಪಿಸಿದೆ ಎಂದು ಅವರು ಹೇಳಿದರು. ಅಲ್ಲದೆ, ಉತ್ತರ ಪ್ರದೇಶ ಸರ್ಕಾರದೊಂದಿಗೆ ಸಮನ್ವಯ ಸಾಧಿಸಲು ಐಎಎಸ್ ಅಧಿಕಾರಿ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ನೇಮಿಸಲಾಗಿದೆ ಎಂದರು.

ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ ಸಿದ್ದರಾಮಯ್ಯ, ಹಲವಾರು ಜೀವಗಳನ್ನು ಬಲಿ ಪಡೆದ ಪ್ರಯಾಗ್‌ರಾಜ್‌ನಲ್ಲಿ ಸಂಭವಿಸಿದ ದುರಂತದಿಂದ ದುಃಖಿತನಾಗಿದ್ದೇನೆ. ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಮಹಾಕುಂಭ ಮೇಳಕ್ಕೆ ಹೋದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ: ಸಿದ್ದರಾಮಯ್ಯ
ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತ: ಕನ್ನಡಿಗರ ರಕ್ಷಣೆಗಾಗಿ ಸರ್ಕಾರ ಸಹಾಯವಾಣಿ ಆರಂಭ

ಕರ್ನಾಟಕದ ಭಕ್ತರು ಸುರಕ್ಷಿತವಾಗಿ ಮರಳುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯದ ಅಧಿಕಾರಿಗಳು ನಿರಂತರ ಕೆಲಸ ಮಾಡುತ್ತಿದ್ದಾರೆ. ಕನ್ನಡಿಗರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಹೇಳಿದರು. ಈ ಮಧ್ಯೆ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ನಾವು ಉತ್ತರ ಪ್ರದೇಶ ರಾಜ್ಯ ವಿಪತ್ತು ನಿರ್ವಹಣಾ ತಂಡದೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದರು.

ರಾಜ್ಯ ಸರ್ಕಾರವು ಅಧಿಕಾರಿಗಳ ತಂಡವನ್ನು ಉತ್ತರ ಪ್ರದೇಶಕ್ಕೆ ಕಳುಹಿಸಿದೆ. ಬೆಳಗಾವಿಯಿಂದ 300 ಕ್ಕೂ ಹೆಚ್ಚು ಜನರು ಸ್ಥಳೀಯ ಬಿಜೆಪಿ ನಾಯಕರ ಸಹಾಯದಿಂದ ಪ್ರಯಾಗ್‌ರಾಜ್‌ಗೆ ಹೋಗಿದ್ದಾರೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com