ಮಹಿಳೆಯರ ಪುಸಲಾಯಿಸಿ ಕಾಮದಾಟ; ಮೊಬೈಲ್ ನಲ್ಲಿ 60ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ; ಮೆಡಿಕಲ್ ಸ್ಟೋರ್ ಮಾಲೀಕನ ಬಂಧನ
ದಾವಣಗೆರೆ: ಔಷಧಿ ತೆಗೆದುಕೊಳ್ಳಲು ಬಂದ ಮಹಿಳೆಯರು, ಯುವತಿಯರು ಮತ್ತು ಬಾಲಕಿಯರನ್ನು ಪುಸಲಾಯಿಸಿ ತನ್ನ ಕಾಮತೃಷೆಗೆ ಬಳಿಸಿಕೊಂಡು ಅದನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದ ಮೆಡಿಕಲ್ ಶಾಪ್ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಬಂಧಿತ ಆರೋಪಿಯನ್ನು ಚೆನ್ನಗಿರಿಯ ಮೆಡಿಕಲ್ ಸ್ಟೋರ್ ಮಾಲೀಕ ಅಮ್ಜಾದ್ ಎಂದು ಗುರುತಿಸಲಾಗಿದೆ. ಬಂಧಿತ ಅಮ್ಜಾದ್ ತನ್ನ ಮೆಡಿಕಲ್ ಸ್ಟೋರ್ ಗೆ ಬರುವ ಮಹಿಳೆಯರು, ಯುವತಿಯರು ಮತ್ತು ಬಾಲಕಿಯರನ್ನು ಪುಸಲಾಯಿಸಿ ತನ್ನ ಕಾಮತೃಷೆಗೆ ಬಳಿಸಿಕೊಳ್ಳುತ್ತಿದ್ದ. ಅಲ್ಲದೆ ಅವರಿಗೆ ತಿಳಿಯದಂತೆ ಆ ದೃಶ್ಯಗಳನ್ನು ತನ್ನ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಳ್ಳುತ್ತಿದ್ದ ಎನ್ನಲಾಗಿದೆ.
ವಿಕೃತ ಕಾಮಿ ಅಮ್ಜಾದ್ ದಾವಣಗೆರೆ ನಗರದ ದೇವರಾಜ್ ಅರಸು ಬಡಾವಣೆಯ ಎ ಬ್ಲಾಕ್ ನಿವಾಸಿಯಾಗಿದ್ದು, ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಮೆಡಿಕಲ್ ಸ್ಟೋರ್ ನಡೆಸುತ್ತಿದ್ದ. ತನ್ನ ಅಂಗಡಿಗೆ ಬರುವ ಹೆಣ್ಣುಮಕ್ಕಳನ್ನೇ ಟಾರ್ಗೆಟ್ ಮಾಡಿಕೊಂಡು ಅವರನ್ನು ತನ್ನ ಕಾಮತೃಷೆಗೆ ಬಳಸಿಕೊಳ್ಳುತ್ತಿದ್ದ. ತನ್ನ ಸರಸ ಸಲ್ಲಾಪವನ್ನು ಮೊಬೈಲ್ನಲ್ಲಿ ವಿಡಿಯೋ ಮಾಡಿಕೊಂಡು ಬಳಿಕ ಅವುಗಳನ್ನು ಲ್ಯಾಪ್ ಟಾಪ್ ಗೆ ಹಾಕಿಕೊಂಡು ವೀಕ್ಷಿಸಿ ವಿಕೃತ ಖುಷಿ ಪಡುತ್ತಿದ್ದ ಎನ್ನಲಾಗಿದೆ.
ಈಗ್ಗೆ ತನ್ನ ಅಂಗಡಿಗೆ ಬಂದ ಶಾಲಾ ಬಾಲಕಿಯನ್ನು ಯಾವುದೋ ಮನೆಗೆ ಕರೆದುಕೊಂಡು ಹೋಗಿ ಅಲ್ಲಿ ಒತ್ತಾಯಪೂರ್ವಕವಾಗಿ ಆಕೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಅಲ್ಲದೆ ಅದನ್ನು ಮೊಬೈಲ್ ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದ. ಅಲ್ಲದೆ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಈತನ ವಿರುದ್ಧ ವ್ಯಾಪರ ಆಕ್ರೋಶ ವ್ಯಕ್ತವಾಗುತ್ತಿದೆ. ಈತನ ಹೀನ ಕೃತ್ಯ ಜಗಜ್ಜಾಹಿರಾಗುತಲ್ಲೇ ಚನ್ನಗಿರಿಯಲ್ಲಿ ಈತನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಈತನ ನೀಚತನ ಖಂಡಿಸಿ ಕೆಲ ಸಂಘಟನೆಗಳಿಂದ ಪ್ರತಿಭಟನೆ ನಡೆಸಲು ನಿರ್ಧರಿಸಿವೆ.
ಏತನ್ಮಧ್ಯೆ ತನ್ನ ಪಾಪಕೃತ್ಯ ಬೆಳಕಿಗೆ ಬಂದ ಬೆನ್ನಲ್ಲೇ ಈತ ಪರಾರಿಯಾಗಿದ್ದ. ಈತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕಲಂ 67, 67(ಎ), 67(ಬಿ) ಐಟಿ ಆಕ್ಟ್ ಮತ್ತು ಕಲಂ 77 ಹಾಗೂ ಕಲಂ 4, 6, 14, 15 ಪೋಕ್ಸೋ ಆಕ್ಟ್ 2012 ಅನ್ವಯ ಪ್ರಕರಣ ದಾಖಲಿಸಲಾಗಿದೆ. ಪ್ರಸ್ತುತ ಈ ಆರೋಪಿ ಅಮ್ಜಾದ್ ನಲ್ಲಿ ಪೊಲೀಸರು ಬಂಧಿಸಿದ್ದು, ಆತನ ಮೊಬೈಲ್ ಕೂಡ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಆತನ ಮೊಬೈಲ್ ನಲ್ಲಿ 60 ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ ಎಂದು ಹೇಳಲಾಗಿದೆ.