Siddaramaiah
ಸಿದ್ದರಾಮಯ್ಯPTI

ED ಬಿಡುಗಡೆ ಮಾಡಿರುವುದು ತನಿಖಾ ವರದಿಯಲ್ಲ, ಜಪ್ತಿ ಮಾಹಿತಿಯಷ್ಟೇ: ಸಿಎಂ ಸಿದ್ದರಾಮಯ್ಯ

ಹಣ ಅಕ್ರಮ ವಹಿವಾಟು ಪ್ರಶ್ನೆ ಈ ಪ್ರಕರಣದಲ್ಲಿ ಎಲ್ಲಿ ಬರುತ್ತದೆ? ಮುಡಾ ಮಾಜಿ ಆಯುಕ್ತ ನಟೇಶ್‌ಗೆ ಇಡಿ ಕೊಟ್ಟಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅದರರ್ಥ ಕಾನೂನು ಪ್ರಕಾರ ಇಲ್ಲ ಎಂಬುದು ತಾನೆ?
Published on

ಮೈಸೂರು: ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಬಿಡುಗಡೆ ಮಾಡಿರುವುದು ತನಿಖಾ ವರದಿಯಲ್ಲ. ಜಪ್ತಿ ವರದಿಯಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣ ಅಕ್ರಮ ವಹಿವಾಟು ಪ್ರಶ್ನೆ ಈ ಪ್ರಕರಣದಲ್ಲಿ ಎಲ್ಲಿ ಬರುತ್ತದೆ? ಮುಡಾ ಮಾಜಿ ಆಯುಕ್ತ ನಟೇಶ್‌ಗೆ ಇಡಿ ಕೊಟ್ಟಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅದರರ್ಥ ಕಾನೂನು ಪ್ರಕಾರ ಇಲ್ಲ ಎಂಬುದು ತಾನೆ? ಇಲ್ಲದಿದ್ದರೆ ನ್ಯಾಯಾಲಯವೇಕೆ ತಡೆಯಾಜ್ಞೆ ಕೊಡುತ್ತಿತ್ತು?' ನನ್ನ ಹೆಸರನ್ನು ಕೆಡಿಸಲು ಇಷ್ಟೆಲ್ಲ ಪ್ರಯತ್ನಗಳು ನಡೆಯುತ್ತಿವೆ. ಇಡಿ ಬಿಡುಗಡೆ ಮಾಡಿದ್ದು ತನಿಖಾ ವರದಿಯಲ್ಲ, ಕೇವಲ ಜಪ್ತಿ ವರದಿ ಎಂದು ಹೇಳಿದರು.

ಇಡಿ ತನಿಖೆ ರಾಜಕೀಯ ಪ್ರೇರಿತ ಎಂಬುದು ಎಲ್ಲರಿಗೂ ಗೊತ್ತಿದೆ. ನನ್ನ ವಿಚಾರದಲ್ಲಿ ಮಾತನಾಡಲು ಇವರಿಗೆ ಏನೂ ಸಿಕ್ಕಿಲ್ಲ. ಈ ವಿಚಾರ ಇಟ್ಟುಕೊಂಡು ನನ್ನ ಹೆಸರಿಗೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಅದರಲ್ಲಿ ಬಿಜೆಪಿ ಯಶಸ್ವಿಯಾಗುವುದಿಲ್ಲ. ಮುಡಾ ವಿಚಾರದಲ್ಲಿ ನಮ್ಮ ಕುಟುಂಬದವರು ಯಾವ ತಪ್ಪು ಮಾಡಿಲ್ಲ ಎಂದು ತಿಳಿಸಿದರು.

ಸಿಎಂ ಬದಲಾವಣೆ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, 'ನನಗೆ ಮತ್ತೆ ಮತ್ತೆ ಅದನ್ನೇ ಕೇಳಬೇಡಿ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದೇ ಆಗುತ್ತದೆ. ಎಲ್ಲವನ್ನೂ ತೀರ್ಮಾನ ಮಾಡುವುದು ಹೈಕಮಾಂಡ್. ಈ ವಿಚಾರದ ಬಗ್ಗೆ ನಾನು ಎಷ್ಟು ಬಾರಿ ಸ್ಪಷ್ಟೀಕರಣ ಕೊಡಲಿ ಹೇಳಿ? ಖಾರವಾಗಿ ಹೇಳಿದರು.

ಇಬ್ಬರು, ಮೂವರು ಸಚಿವರು ಜೊತೆಯಲ್ಲಿ ಕುಳಿತು ಮಾತನಾಡಿದ ತಕ್ಷಣ ಚರ್ಚೆ ನಡೆದಿರುವುದು ಇದೇ ವಿಚಾರ ಎಂದು ಯಾಕೆ ಗ್ರಹಿಸುತ್ತೀರಾ? ಊಹಾ ಪತ್ರಿಕೋದ್ಯಮ ಬಿಟ್ಟು ಬಿಡಿ. 3-4 ಜನ ಸೇರಿದಾಗ ರಾಜಕೀಯ ಚರ್ಚೆ ಮಾಡುತ್ತೇವೆ. ನನ್ನ ಪ್ರಕಾರ ಡಿನ್ನರ್ ಮೀಟಿಂಗ್ ಅಥವಾ ಸಭೆ ಮಾಡುವುದರಲ್ಲಿ ತಪ್ಪೇ ಇಲ್ಲ. ನೀವು ಅದರಲ್ಲಿ ಹುಡುಕುವ ಗ್ರಹಿಕೆ ಸರಿ ಇಲ್ಲ ಅಷ್ಟೇ ಎಂದರು.

Siddaramaiah
ಮುಡಾ ಪ್ರಕರಣ: ತನಿಖೆಯಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಅಧಿಕಾರಗಳ ಹೆಸರು ಸೇರ್ಪಡೆ

ಕೇಂದ್ರ ಬಜೆಟ್‌ ಕುರಿತು ಪ್ರತಿಕ್ರಿಯಿ, ಈ ಬಜೆಟ್ ನಿಂದ ನಾನು ಏನನ್ನೂ ನಿರೀಕ್ಷೆ ಮಾಡುವುದಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ದುಡ್ಡು ಕೊಡುತ್ತೇನೆಂದು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು. ಆದರೆ, ಒಂದು ರೂಪಾಯಿಯನ್ನೂ ಕೊಟ್ಟಿಲ್ಲ. ಹೀಗಾಗಿ ನಾನು ಏನನ್ನೂ ನಿರೀಕ್ಷೆ ಮಾಡುವುದಿಲ್ಲ ಎಂದು ಕಿಡಿಕಾರಿದರು.

ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ‌. 4 ಲಕ್ಷ ಕೋಟಿ ರೂಪಾಯಿ ತೆರಿಗೆ ಕೊಡುತ್ತೇವೆ. ಕೇವಲ ರೂ. 68 ಸಾವಿರ ಕೋಟಿ ತೆರಿಗೆ ನಮಗೆ ಕೊಡುತ್ತಾರೆ. ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ‌. ನಮ್ಮಗೆ ಈ ಬಾರಿಯೂ ಅನ್ಯಾಯ ಮಾಡುತ್ತಾರೆ' ಎಂದರು.

ಮೈಕ್ರೊ ಫೈನಾನ್ಸ್ ಕುರಿತು ಮಾತನಾಡಿ, ಸುಗ್ರೀವಾಜ್ಞೆ ಮೂಲಕ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಜನರು ಎಲ್ಲಿ ಸಾಲ ಸಿಗುತ್ತೆ ಅಲ್ಲಿ ತೆಗೆದುಕೊಳ್ಳುತ್ತಿದ್ದಾರೆ. ಆದರೆ, ಮೈಕ್ರೋ ಫೈನಾನ್ಸ್​ನವರು ಬಡ್ಡಿ ಜಾಸ್ತಿ ಹಾಕುತ್ತಾರೆ. ಹಣ ವಸೂಲಿ ಮಾಡುವಾಗ ಫೈನಾನ್ಸ್​ನವರು ಹಿಂಸೆ ಕೊಡುತ್ತಾರೆ. ರೌಡಿಗಳನ್ನು ಬಿಟ್ಟು ವಸೂಲಿ ಮಾಡುತ್ತಿದ್ದಾರೆ. ಮೈಕ್ರೋ ಫೈನಾನ್ಸ್​ ಕೇಂದ್ರ ಸರ್ಕಾರದ ಅಡಿಯಲ್ಲಿ ಬರುತ್ತದೆ. ಈಗ ಸುಗ್ರೀವಾಜ್ಞೆ ಮೂಲಕ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಯಾರೂ ಅತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ನಾನು ಮನವಿ ಮಾಡುತ್ತೇನೆ, ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com