
ಬೆಳಗಾವಿ: ರಾಜ್ಯದ ಗಡಿ ಹಾಗೂ ನದಿಗಳಿಗೆ ಸಂಬಂಧಿಸಿದ ವಿವಾದಗಳ ವಿಷಯದ ಬಗ್ಗೆ ನಿರಂತರವಾಗಿ ಪರಿವೀಕ್ಷಿಸಲು ಕಾನೂನು, ನ್ಯಾಯ ಶಾಸನ ರಚನೆ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ನೇಮಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
2013 ರಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೆಚ್.ಕೆ.ಪಾಟೀಲ್ ಅವರನ್ನು ಗಡಿ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿತ್ತು. 2018ರ ನಂತರ ಅಧಿಕಾರಕ್ಕೆ ಬಂದ ಯಾವುದೇ ಸರಕಾರ ಗಡಿ ಉಸ್ತುವಾರಿ ಸಚಿವರನ್ನು ನೇಮಿಸಿರಲಿಲ್ಲ.
ಮಹಾರಾಷ್ಟ್ರ ಸರಕಾರವು ಗಡಿವಿವಾದ ಸಂಬಂಧ ಇಬ್ಬರೂ ಉಸ್ತುವಾರಿ ಸಚಿವರನ್ನು ಇತ್ತೀಚೆಗೆ ನೇಮಿಸಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಕೂಡ ಇದೀಗ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದೆ.
ಸರ್ಕಾರದ ಈ ಕ್ರಮವನ್ನು ಸ್ವಾಗತಿಸಿರುವ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಾಟೀಲ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದೆ.
ಸಮಿತಿಯ ಅಧ್ಯಕ್ಷ ಅಶೋಕ್ ಚಂದರ್ಗಿ ಅವರು ಹೇಳಿಗೆ ನೀಡಿ, ಹೊಸದಾಗಿ ನೇಮಕಗೊಂಡ ಸಚಿವರು ಬೆಳಗಾವಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸುವಂತೆ ಒತ್ತಾಯಿಸಿದ್ದಾರೆ.
Advertisement