
ಬೆಂಗಳೂರು: ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಎಂದು ಅರ್ಥವಲ್ಲವೇ? ಊಹಾ ಪತ್ರಿಕೋದ್ಯಮವು ಪತ್ರಿಕೋದ್ಯಮ ಮತ್ತು ಸಮಾಜ ಎರಡಕ್ಕೂ ಅಪಾಯ. ಹೀಗಾಗಿ ಪತ್ರಿಕೋದ್ಯಮ ಇದರಿಂದ ಹೊರಗೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಬೆಂಗಳೂರಿನಲ್ಲಿ ನಡೆದ "ಪತ್ರಿಕಾ ದಿನಾಚರಣೆ-2025" ಹಾಗೂ "ನಿಜ ಸುದ್ದಿಗಾಗಿ ಸಮರ" ಸಂವಾದದಲ್ಲಿ ಮಾತನಾಡಿದ ಸಿಎಂ, ಮಾಧ್ಯಮ ಸ್ವತಂತ್ರವಾಗಿ, ನಿರ್ಭೀತಿಯಿಂದ ಸುದ್ದಿ ಮಾಡಬೇಕು ಎನ್ನುವುದರಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಜವಾಹರಲಾಲ್ ನೆಹರೂ ಅವರೂ ಇದನ್ನೇ ನಂಬಿದ್ದರು ಮತ್ತು ಪಾಲಿಸಿದ್ದರು. ಯಾವುದೇ ಚಾನಲ್ ಗಳು ನನ್ನ ಬಗ್ಗೆ ಎಷ್ಟು ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಮಾಡಿ ಪ್ರಶ್ನೆ ಮಾಡುವವನಲ್ಲ ಎಂದಿದ್ದಾರೆ.
ನನ್ನ ಕಾರಿನ ಮೇಲೆ ಕಾಗೆ ಕೂತಿದ್ದನ್ನು ಚರ್ಚೆ ನಡೆಸಿ, ಮೂಢನಂಬಿಕೆ ಬಿತ್ತುವುದನ್ನು ಪತ್ರಿಕಾವೃತ್ತಿ ಎಂದು ಕರೆಯಬೇಕಾ? ಜನರನ್ನು ಮೌಡ್ಯಕ್ಕೆ ತಳ್ಳುವುದು ಪತ್ರಿಕಾ ವೃತ್ತಿಯಾ? ಈ ಬಗ್ಗೆ ನೀವೆಲ್ಲರೂ ಯೋಚಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
Advertisement