ಪರಿಶಿಷ್ಟ ಜಾತಿ ಸಮೀಕ್ಷೆ: ಸಮೀಕ್ಷಾ ತಂಡ ನಿಮ್ಮ ಮನೆ ತಲುಪಿರುವುದನ್ನು ಮಾತ್ರ ಸ್ಟಿಕ್ಕರ್ ಸೂಚಿಸುತ್ತದೆ: BBMP ಸ್ಪಷ್ಟನೆ

ಕರ್ನಾಟಕ ಸರ್ಕಾರವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ, ಬೆಂಗಳೂರು ನಗರದಾದ್ಯಂತ ಪರಿಶಿಷ್ಟ ಜಾತಿ(SC) ಸಮಗ್ರ ಸಮೀಕ್ಷೆಯನ್ನು ನಡೆಸುತ್ತಿದೆ.
Survey
ಸಮೀಕ್ಷೆ
Updated on

ಬೆಂಗಳೂರು: ಪರಿಶಿಷ್ಟ ಜಾತಿ ಸಮೀಕ್ಷೆ ನಡೆಸದೇ ಸಮೀಕ್ಷೆ ಪೂರ್ಣಗೊಳಿಸಿರುವುದಾಗಿ ಮನೆ ಮನೆಗೆ ಸ್ಟಿಕ್ಕರ್‌ ಅಂಟಿಸುವ ಕೆಲಸವನ್ನು ಅಧಿಕಾರಿಗಳು ಮಾಡುತ್ತಿದ್ದಾರೆಂಬ ಆರೋಪಗಳು ಕೇಳಿ ಬಂದಿದ್ದು, ಆರೋಪಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬುಧವಾರ ಸ್ಪಷ್ಟನೆ ನೀಡಿದೆ.

ವಿವಾದ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪಾಲಿಕೆ, ಸ್ಟಿಕ್ಕರ್ ಕೇವಲ ಸಮೀಕ್ಷಾ ತಂಡವು ಆ ಮನೆಗೆ ತಲುಪಿರುವುದನ್ನು ಮಾತ್ರ ಸೂಚಿಸುತ್ತದೆ. ನೇರ ಸಂವಹನ ನಡೆಯದ ಹೊರತು ಸಮೀಕ್ಷೆ ಪೂರ್ಣಗೊಂಡಿದೆ ಎಂದರ್ಥವಲ್ಲ. ತಮ್ಮ ಕುಟುಂಬವನ್ನು ಸಮೀಕ್ಷೆಯಲ್ಲಿ ಸೇರಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ನಿವಾಸಿಗಳು ಸಹಾಯವಾಣಿ ಅಥವಾ ಆನ್‌ಲೈನ್ ಪೋರ್ಟಲ್ ಅನ್ನು ಬಳಸಬೇಕೆಂದು ಹೇಳಿದೆ.

ಕರ್ನಾಟಕ ಸರ್ಕಾರವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ, ಬೆಂಗಳೂರು ನಗರದಾದ್ಯಂತ ಪರಿಶಿಷ್ಟ ಜಾತಿ(SC) ಸಮಗ್ರ ಸಮೀಕ್ಷೆಯನ್ನು ನಡೆಸುತ್ತಿದೆ. ಈ ಸಮೀಕ್ಷೆಯು ಪ್ರತಿ ಅರ್ಹ ಕುಟುಂಬವನ್ನು ಒಳಗೊಂಡಿದೆಯೇ ಎಂದು ಖಚಿತಪಡಿಸಿಕೊಳ್ಳುವ ಗುರಿ ಹೊಂದಿದೆ.

ಸಮೀಕ್ಷಾ ತಂಡಗಳು ನಿವಾಸಿಗಳೊಂದಿಗೆ ಸಂವಹನ ನಡೆಸದೆ ಮನೆಗಳ ಮೇಲೆ ಸಮೀಕ್ಷೆಯ ಸ್ಟಿಕ್ಕರ್‌ಗಳನ್ನು ಅಂಟಿಸಿವೆ ಎಂದು ಕೆಲವು ನಿವಾಸಿಗಳು, ಸಾಮಾಜಿಕ ಮಾಧ್ಯಮ, ಟಿವಿ ಸುದ್ದಿ ವಾಹಿನಿಗಳು ಮತ್ತು ನಮ್ಮ ಸಹಾಯವಾಣಿಯಲ್ಲಿ ಕಳವಳ ವ್ಯಕ್ತಪಡಿಸಿರುವುದನ್ನು ಗಮನಿಸಲಾಗಿದೆ. ಈ ಕಳವಳಗಳನ್ನು ನಿವಾರಿಸಲು ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಹಲವು ಅಂಶಗಳ ಮೂಲಕ ಸ್ಪಷ್ಟಪಡಿಸಲು ಬಯಸುತ್ತೇವೆ ಎಂದು ಬಿಬಿಎಂಪಿ ತಿಳಿಸಿದೆ.

  • ಸ್ಟಿಕ್ಕರ್‌ ಅಂಟಿಸುವ ಉದ್ದೇಶ: ಸಮೀಕ್ಷಾ ತಂಡಗಳು ಪ್ರತಿ ಮನೆಗೆ ಭೇಟಿ ನೀಡಿರುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ದೃಢೀಕರಿಸುವ ಉದ್ದೇಶದಿಂದ ಮನೆ-ಮನೆಗೆ ಸ್ಟಿಕ್ಕರ್‌ಗಳನ್ನು ಅಂಟಿಸುವುದು ಸಮೀಕ್ಷಾ ಪ್ರಕ್ರಿಯೆಯ ಒಂದು ಭಾಗವಾಗಿದೆ. ಇದರಿಂದ ಯಾವುದೇ ಪರಿಶಿಷ್ಟ ಜಾತಿ ಕುಟುಂಬವು ಸಮೀಕ್ಷೆಯಿಂದ ಹೊರಗುಳಿಯದಂತೆ ಖಚಿತಪಡಿಸುತ್ತದೆ.

  • ಸಂವಹನದ ಅಗತ್ಯತೆ: ಮನೆಯ ಸದಸ್ಯರೊಂದಿಗೆ ಸಂವಹನ ನಡೆಸದೆ ಸ್ಟಿಕ್ಕರ್‌ಗಳನ್ನು ಅಂಟಿಸಬಾರದು ಎಂದು ಸಮೀಕ್ಷಾ ತಂಡಗಳಿಗೆ ಸ್ಪಷ್ಟವಾಗಿ ಸೂಚನೆ ನೀಡಲಾಗಿದೆ. ಆದಾಗ್ಯೂ, ಕೆಲ ಸಂದರ್ಭಗಳಲ್ಲಿ ಇದನ್ನು ಅನುಸರಿಸದಿರಬಹುದು ಎಂದು ನಾವು ಒಪ್ಪಿಕೊಳ್ಳುತ್ತೇವೆ. ಸಮೀಕ್ಷೆ ನಡೆಸಿದ ಲಕ್ಷಾಂತರ ಮನೆಗಳಲ್ಲಿ, ಕೆಲವು ಮನೆಗಳು ನಮ್ಮ ಸಮೀಕ್ಷಕರಿಂದ ತಪ್ಪಿಹೋಗಿರಬಹುದು.

  • ಸಂವಹನ ನಡೆಯದಿದ್ದಲ್ಲಿ ಏನು ಮಾಡಬೇಕು?: ಯಾವುದೇ ಸಂವಹನವಿಲ್ಲದೆ ಸ್ಟಿಕ್ಕರ್ ಅಂಟಿಸಿದ್ದರೆ, ದಯವಿಟ್ಟು ನಮ್ಮ ಸಹಾಯವಾಣಿ ಸಂಖ್ಯೆ 9481359000ಗೆ ಕರೆ ಮಾಡಿ(ಸಂಖ್ಯೆಯು ಸ್ಟಿಕ್ಕರ್‌ನ ಮೇಲೆ ಮುದ್ರಿತವಾಗಿರುತ್ತದೆ) ಸಮೀಕ್ಷೆಯನ್ನು ಸರಿಯಾಗಿ ಪೂರ್ಣಗೊಳಿಸಲು ಅಗತ್ಯ ವ್ಯವಸ್ಥೆ ಮಾಡುತ್ತೇವೆ.

  • ಸ್ವಯಂ ಘೋಷಣೆಯ ಆಯ್ಕೆ: ಇನ್ನು ಸಮೀಕ್ಷೆಗೆ ಒಳಪಡದ ಯಾವುದೇ ಪರಿಶಿಷ್ಟ ಜಾತಿ ಕುಟುಂಬವು ಆನ್‌ಲೈನ್‌ನಲ್ಲಿ ಸ್ವಯಂ ಘೋಷಣಾ ಫಾರ್ಮ್ ಅನ್ನು ಭರ್ತಿ ಮಾಡುವ ಮೂಲಕ ಸಮೀಕ್ಷೆಯಲ್ಲಿ ಭಾಗವಹಿಸಬಹುದು. ಲಿಂಕ್ ಅನ್ನು ಪ್ರವೇಶಿಸಲು ಮತ್ತು ನಿಮ್ಮ ಮಾಹಿತಿಯನ್ನು ಸಲ್ಲಿಸಲು ಸ್ಟಿಕ್ಕರ್‌ನಲ್ಲಿರುವ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿ.

  • ನಿಮ್ಮ ಭಾಗವಹಿಸುವಿಕೆ ಮುಖ್ಯ: ಸ್ಟಿಕ್ಕರ್ ಕೇವಲ ಸಮೀಕ್ಷಾ ತಂಡವು ಆ ಮನೆಗೆ ತಲುಪಿರುವುದನ್ನು ಮಾತ್ರ ಸೂಚಿಸುತ್ತದೆ. ನೇರ ಸಂವಹನ ನಡೆಯದ ಹೊರತು ಸಮೀಕ್ಷೆ ಪೂರ್ಣಗೊಂಡಿದೆ ಎಂದರ್ಥವಲ್ಲ. ತಮ್ಮ ಕುಟುಂಬವನ್ನು ಸಮೀಕ್ಷೆಯಲ್ಲಿ ಸೇರಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ನಿವಾಸಿಗಳು ಸಹಾಯವಾಣಿ ಅಥವಾ ಆನ್‌ಲೈನ್ ಪೋರ್ಟಲ್ ಅನ್ನು ಬಳಸಿ.

Survey
ಪರಿಶಿಷ್ಟ ಜಾತಿ ಸಮೀಕ್ಷೆ: ಸರ್ವೆ ಮಾಡದೆ ಮನೆಗಳಿಗೆ ಸ್ಟಿಕ್ಕರ್​ ಅಂಟಿಸಿದ ಅಧಿಕಾರಿಗಳು?

ಆನ್‌ಲೈನ್ ಸ್ವಯಂ ಘೋಷಣಾ ಪೋರ್ಟಲ್:

https://schedulecastesurvey.karnataka.gov.in/selfdeclaration/

ಪರಿಶಿಷ್ಟ ಜಾತಿ ಸಮೀಕ್ಷಾ ಸಹಾಯವಾಣಿ: 9481359000

ಸಮಗ್ರ ಮತ್ತು ನಿಖರವಾದ ಸಮೀಕ್ಷೆಯನ್ನು ನಡೆಸಲು ನಮಗೆ ಸಹಕರಿಸಿದಕ್ಕಾಗಿ ನಿಮ್ಮ ಸಹಕಾರವನ್ನು ಹೃತ್ಪೂರ್ವಕವಾಗಿ ಪ್ರಶಂಸಿಸಲಾಗುವುದು. ನಿಮ್ಮ ಧ್ವನಿ ಮುಖ್ಯವಾಗಿದೆ - ಪ್ರತಿ ಅರ್ಹ ಕುಟುಂಬವು ಸಮೀಕ್ಷೆಯಲ್ಲಿ ಪ್ರತಿನಿಧಿಸಲ್ಪಟ್ಟಿದೆ ಎಂದು ಖಚಿತಪಡಿಸಿಕೊಳ್ಳಲು ಒಟ್ಟಾಗಿ ಕೆಲಸ ಮಾಡೋಣ ಎಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com